Advertisement

ಅ.16ರಂದು “ಒಳನಾಡು ಮೀನು ಉತ್ಪಾದಕರ ಸಮಾವೇಶ-2022′

08:32 PM Oct 14, 2022 | Team Udayavani |

ಬೆಂಗಳೂರು: ಮೀನುಗಾರಿಕೆ ಇಲಾಖೆ ವತಿಯಿಂದ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಅ.16ರಂದು “ಒಳನಾಡು ಮೀನು ಉತ್ಪಾದಕರ ಸಮಾವೇಶ-2022′ ಹಮ್ಮಿಕೊಳ್ಳಲಾಗಿದೆ ಎಂದು ಮೀನುಗಾರಿಕೆ ಸಚಿವ ಎಸ್‌.ಅಂಗಾರ ಹೇಳಿದರು.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮಾವೇಶ ಉದ್ಘಾಟಿಸಲಿದ್ದಾರೆ. ಭಾರತ ಸರ್ಕಾರದ ಮಾಹಿತಿ ಮತ್ತು ಪ್ರಸರಣ, ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ರಾಜ್ಯ ಸಚಿವ ಡಾ.ಎಲ್‌.ಮುರುಗನ್‌ ಮತ್ತಿತರರು ಉಪಸ್ಥಿತರಿರಲಿದ್ದಾರೆ. ಸಮಾವೇಶದಲ್ಲಿ 10 ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆಯಿದ್ದು ಸಾರ್ವಜನಿಕರಿಗೆ ಮುಕ್ತ ಅವಕಾಶ ಕಲ್ಪಿಸಲಾಗಿದೆ. ಸಮಾವೇಶದಲ್ಲಿ 4 ಕಾರ್ಯಗಾರಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

760 ಕೋಟಿ ರೂ. ಸದ್ಬಳಕೆ: ಒಳನಾಡು ಮೀನುಗಾರಿಕಾ ರೈತರಿಗೆ ಮೀನುಗಾರಿಕಾ ಕೃಷಿಯಲ್ಲಿ ತೊಡಗಿಸಿಕೊಳ್ಳಲು ಈ ಸಮಾವೇಶ ಸಹಕಾರಿಯಾಗಲಿವೆ. 5 ವರ್ಷಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ 725 ಕೋಟಿ ಅನುದಾನ ನಿಗದಿಪಡಿಸಿದೆ. ಇಲಾಖೆಯು 760 ಕೋಟಿ ರೂ. ಅನುದಾನವನ್ನು ಈಗಾಗಲೇ 3 ವರ್ಷಗಳಲ್ಲಿ ಸದ್ಬಳಕೆ ಮಾಡಲಾಗಿದೆ ಎಂದು ಹೇಳಿದರು.

 

Advertisement

Udayavani is now on Telegram. Click here to join our channel and stay updated with the latest news.

Next