Advertisement

ಇನ್ನಂಜೆ ಗ್ರಾಮ ಪಂಚಾಯತ್‌ನಲ್ಲಿ ಮತ್ತೆ ಬಿಜೆಪಿ ಆಡಳಿತ ಅಧಿಕಾರಕ್ಕೆ

07:07 PM Feb 16, 2021 | Team Udayavani |

ಕಾಪು: ಇನ್ನಂಜೆ ಗ್ರಾಮ ಪಂಚಾಯತ್‌ನ ನೂತನ ಅಧ್ಯಕ್ಷರಾಗಿ ಮಲ್ಲಿಕಾ ಆಚಾರ್ಯ ಮತ್ತು ಉಪಾಧ್ಯಕ್ಷರಾಗಿ ಸುರೇಶ್ ಶೆಟ್ಟಿ ಮಂಡೇಡಿ (ಅಣ್ಣು) ಆಯ್ಕೆಯಾಗಿದ್ದಾರೆ.

Advertisement

ಇನ್ನಂಜೆ ಗ್ರಾಮ ಪಂಚಾಯತ್‌ನಲ್ಲಿ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತರಾಗಿ ಮಲ್ಲಿಕಾ ಆಚಾರ್ಯ ಮತ್ತು ಕಾಂಗ್ರೆಸ್ ಬೆಂಬಲಿತ ಸುನೀತಾ ಕುಲಾಲ್ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತರಾಗಿ ಸುರೇಶ್ ಶೆಟ್ಟಿ ಮಂಡೇಡಿ ಮತ್ತು ಪಕ್ಷೇತರ ಸದಸ್ಯ ರಾಜೇಶ್ ಆಚಾರ್ಯ ಸ್ಪರ್ಧಿಸಿದ್ದರು.

13 ಮಂದಿ ಸದಸ್ಯ ಬಲದ ಇನ್ನಂಜೆ ಗ್ರಾ.ಪಂ. ನಲ್ಲಿ ಬಿಜೆಪಿ 7, ಕಾಂಗ್ರೆಸ್ 3 ಮತ್ತು ಪಕ್ಷೇತರ 3 ಮಂದಿ ಸದಸ್ಯರು ಚುನಾಯಿತರಾಗಿದ್ದರು. ಮಂಗಳವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಹುದ್ದೆಗೆ ಸ್ಪರ್ಧಿಸಿದ ಮಲ್ಲಿಕಾ ಆಚಾರ್ಯ 7 ಮತಗಳನ್ನು ಗಳಿಸಿ ಜಯ ಸಾಧಿಸಿದ್ದು, ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ ಸುರೇಶ್ ಶೆಟ್ಟಿ ಅವರು 9 ಮತಗಳನ್ನು ಗಳಿಸಿ ಜಯ ಸಾಧಿಸಿದರು.

ಇದನ್ನೂ ಓದಿ:“ಜನರನ್ನು ಲೂಟಿ ಮಾಡಲು ಮೋದಿ ಸರ್ಕಾರ ನಿರ್ಧರಿಸಿದೆ” : ರಾಹುಲ್ ಗಾಂಧಿ

ಮೀನುಗಾರಿಕಾ ಇಲಾಖೆಯ ಅಧಿಕಾರಿ ಸಚಿನ್ ಕುಮಾರ್ ಚುನಾವಣಾಧಿಕಾರಿಯಾಗಿ ಭಾಗವಹಿಸಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next