Advertisement

ಇನೋವಾ ಕಾರು ಪಲ್ಟಿ: ಸ್ಥಳದಲ್ಲೇ ಓರ್ವ ಸಾವು

10:05 AM Sep 05, 2019 | keerthan |

ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಕೋಲಾರ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಇನೋವಾ ಕಾರು ಪಲ್ಟಿಯಾಗಿ ವ್ಯಕ್ತಿಯೊಬ್ಬ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ.

Advertisement

ಮೃತ ವ್ಯಕ್ತಿಯನ್ನು ಚಿಂತಾಮಣಿ ನಗರದ ಮಾಳಪಲ್ಲಿಯ ನಿವಾಸಿ ಜೀವನ್ ಕುಮಾರ್ (32) ಎಂದು ಗುರುತಿಸಲಾಗಿದೆ.

ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ

ಘಟನೆಯಲ್ಲಿ ಸುನೀಲ್ ಬಿನ್ ಜಯರಾಮ್ ಎಂಬುವರಿಗೆ ಗಾಯವಾಗಿದೆ. ಸ್ಥಳಕ್ಕೆ ಚಿಂತಾಮಣಿ ಗ್ರಾಮಾಂತರ ಠಾಣೆಯ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

Advertisement

Udayavani is now on Telegram. Click here to join our channel and stay updated with the latest news.

Next