Advertisement
ಯಡಿಯೂರಪ್ಪ ಹಿಂದೆ ಮುಖ್ಯಮಂತ್ರಿಯಾಗಿದ್ದ ವೇಳೆ ಗಂಗೇನಹಳ್ಳಿ ಬಡಾವಣೆಯಲ್ಲಿರುವ ಜಮೀನನ್ನು ಡಿನೋಟಿಫಿಕೇಶನ್ ಮಾಡಿರುವ ಆರೋಪ ಇದ್ದು, ಲೋಕಾಯುಕ್ತ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪ್ರಕರಣದ ಕುರಿತು ಹೇಳಿಕೆ ದಾಖಲಿಸಿಕೊಳ್ಳಲು ಹಾಗೂ ಮಾಹಿತಿ ಕಲೆ ಹಾಕಲು ಲೋಕಾಯುಕ್ತ ಪೊಲೀಸರು ನೀಡಿದ್ದ ನೋಟಿಸ್‌ನ ಹಿನ್ನೆಲೆಯಲ್ಲಿ ಶನಿವಾರ ಲೋಕಾಯುಕ್ತ ಕಚೇರಿಯಲ್ಲಿರುವ ಪೊಲೀಸ್ ವಿಭಾಗಕ್ಕೆ ಹಾಜರಾಗಿದ್ದರು.
ಯಡಿಯೂರಪ್ಪ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಜಂಟಿ ಡಿನೋಟಿಫಿಕೇಶನ್ ಪ್ರಕರಣದ ಕುರಿತು ಕೂಡಲೇ ಲೋಕಾಯುಕ್ತದವರು ತಮ್ಮ ತನಿಖೆ ಪೂರೈಸಿ ತತ್‌ಕ್ಷಣ ವರದಿ ಸಲ್ಲಿಸಬೇಕು. ಲೋಕಾಯುಕ್ತ ತನಿಖೆಯಲ್ಲಿ ಪ್ರಗತಿ ಆಗಿಲ್ಲ. ತಪ್ಪು ಮಾಡಿದವರಿಗೆ ಶಿಕ್ಷೆಯಾಗಬೇಕು. ಈ ತನಿಖಾ ವರದಿ ಆಧರಿಸಿ ಸರಕಾರವು ಮುಂದಿನ ಕ್ರಮ ಕೈಗೊಳ್ಳಲಿದೆ ಎಂದು ಇತ್ತೀಚೆಗಷ್ಟೆ ಕಂದಾಯ ಸಚಿವ ಕೃಷ್ಣಬೈರೇಗೌಡ ಹಾಗೂ ಕಾಂಗ್ರೆಸ್ ಮುಖಂಡರು ಪತ್ರಿಕಾಗೋಷ್ಠಿ ನಡೆಸಿ ವಾಗ್ಧಾಳಿ ನಡೆಸಿದ್ದರು. ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡ ಲೋಕಾಯುಕ್ತ ಪೊಲೀಸರು ಬಿಎಸ್‌ವೈಗೆ ವಿಚಾರಣೆಗಾಗಿ ಬುಲಾವ್ ನೀಡಿದ್ದರು.