Advertisement
ಈ ಬಗ್ಗೆ ಪತ್ರಿಕಾ ಪ್ರಕಟನೆ ನೀಡಿರುವ ಅವರು, ದಿವಂಗತ ಆರ್. ಅಂಬಿಕಾಪತಿ ಹಾಗೂ ಗುತ್ತಿಗೆದಾರರ ಸಂಘದ ಇತರ ಪದಾಧಿಕಾರಿಗಳು ಮಾಧ್ಯಮಗಳಿಗೆ ನೀಡಿದ್ದ ಹೇಳಿಕೆಯಲ್ಲಿ ಲೋಕೋಪಯೋಗಿ, ಆರೋಗ್ಯ, ವಸತಿ, ಉನ್ನತ ಶಿಕ್ಷಣ, ಸಣ್ಣ ನೀರಾವರಿ ಹೀಗೆ ಹಲವು ಇಲಾಖೆಗಳಲ್ಲಿನ ಕಮಿಷನ್ ಹಾಗೂ ಕೋಲಾರ ಜಿಲ್ಲೆಯ ಹಿಂದಿನ ಉಸ್ತುವಾರಿ ಸಚಿವರಾದ ಮುನಿರತ್ನ ವಿರುದ್ಧ ಲಂಚದ ಆರೋಪ ಮಾಡಿದ್ದರು.
Related Articles
ಲೋಕಾಯುಕ್ತ ವರದಿಯಲ್ಲಿ ಅಂಬಿಕಾಪತಿಯವರು ಮರಣ ಹೊಂದಿದ ಕಾರಣ, ಅವರಿಂದ ಹೆಚ್ಚಿನ ಮಾಹಿತಿ ಸಂಗ್ರಹಿಸಲು ಸಾಧ್ಯವಾಗಲಿಲ್ಲ, ಹಾಗಾಗಿ ಅಂಬಿಕಾಪತಿ ಮಾಡಿರುವ ಆಪಾದನೆಯು ಮೇಲ್ನೋಟಕ್ಕೆ ಸಾಬೀತಾಗಿರುವುದಿಲ್ಲವೆಂದು ವಿಚಾರಣಾಧಿಕಾರಿಗಳು ವರದಿ ಸಲ್ಲಿಸಿದ್ದಾರೆ. ಇದು ಬಿಬಿಎಂಪಿ ವ್ಯಾಪ್ತಿಯ ಆಟದ ಮೈದಾನಕ್ಕೆ ಸಂಬಂಧಿಸಿದ ಒಂದು ಕಾಮಗಾರಿಗೆ ಸಂಬಂಧಿಸಿದಂತೆ ಮಾಡಿರುವ ತನಿಖೆ, ಇದು ಬಿಜೆಪಿಯ 40 ಪರ್ಸೆಂಟ್ ಹಗರಣಕ್ಕೆ ಸಿಕ್ಕಿರುವ ಕ್ಲೀನ್ಚಿಟ್ ಅಲ್ಲ ಅಥವಾ ಅಕ್ರಮದ ನಿರಾಕರಣೆಯೂ ಅಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ.
Advertisement
ಬಿಜೆಪಿಯದ್ದು 40 ಅಲ್ಲ 400 ಪರ್ಸೆಂಟ್ ಸರಕಾರ ; ನ್ಯಾ| ಡಿ’ಕುನ್ಹಾ ವರದಿಯಲ್ಲಿ ಬೆಚ್ಚಿ ಬೀಳಿಸುವ ಅಂಶಗಳಿವೆಬಿಜೆಪಿಯದ್ದು 40 ಪರ್ಸೆಂಟೇಜ್ ಕಮಿಷನ್ ಸರಕಾರವಲ್ಲ, ಅವರದ್ದು 400 ಪರ್ಸೆಂಟ್ ಸರಕಾರ ಎಂದು ಐಟಿಬಿಟಿ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ. ಸುದ್ದಿಗಾರರೊಂದಿಗೆ ಬಿಜೆಪಿ ಸರಕಾರದ ಮೇಲೆ ಹೊರಿಸಲಾಗಿದ್ದ ಶೇ. 40 ಆರೋಪ ನಿರಾಧಾರ ಎಂದು ಲೋಕಾಯುಕ್ತ ಕ್ಲೀನ್ಚಿಟ್ ನೀಡಿದೆ ಎಂಬ ಬಗ್ಗೆ ಪ್ರತಿಕ್ರಿಯಿಸಿದ ಅವರು, 40 ಪರ್ಸೆಂಟೇಜ್ ಕಮಿಷನ್ ಆರೋಪ ನಿರಾಧಾರವಾಗಿದ್ದರೆ ನ್ಯಾ| ಮೈಕಲ್ ಡಿ ಕುನ್ಹಾ ಆಯೋಗ ಕ್ರಮಕ್ಕೆ ಯಾಕೆ ಸೂಚಿಸಿದೆ? ಕೋವಿಡ್ ಸಂದರ್ಭದಲ್ಲಿ 300 ರೂ. ಕಿಟ್ಗೆ 2 ಸಾವಿರ ರೂ. ಕೊಟ್ಟು ಖರೀದಿಸಿದ್ದಾ ರೆ. ಒಂದು ಕೇಸ್ನಲ್ಲಿ ಎಫ್ಐಆರ್ ದಾಖಲಿಸಲು ಆಯೋಗ ಸೂಚಿಸಿದೆ ಎಂದರು. ಕೋವಿಡ್ ಅಕ್ರಮದ ಬಗ್ಗೆ ನ್ಯಾ| ಮೈಕಲ್ ಡಿ’ಕುನ್ಹಾ ವರದಿ ನೀಡಿದ್ದಾರೆ. ಅದರಲ್ಲಿ ಹಲವು ಬೆಚ್ಚಿ ಬೀಳಿಸುವ ಅಂಶಗಳಿವೆ. ಯಾವ ರೀತಿಯಲ್ಲಿ ವಿದೇಶಗಳಿಂದ ಕೋವಿಡ್ ಚಿಕಿತ್ಸೆಗೆ ಉಪಕರಣಗಳನ್ನು ಹೆಚ್ಚಿನ ದರಕ್ಕೆ ತರಿಸಿಕೊಳ್ಳಲಾಯಿತು ಎಂಬುದನ್ನು ಉಲ್ಲೇಖ ಮಾಡಲಾಗಿದೆ. ಈಗ ಮಧ್ಯಾಂತರ ವರದಿ ಮಾತ್ರ ನೀಡಲಾಗಿದೆ. ಪೂರ್ಣ ವರದಿಯಲ್ಲಿ ಮತ್ತಷ್ಟು ಅಂಶಗಳು ಬಹಿರಂಗವಾಗುವ ಸಾಧ್ಯತೆ ಇದೆ ಎಂದು ಪ್ರಿಯಾಂಕ್ ವಿವರಿಸಿದರು. ಬಿಜೆಪಿಯವರಿಗೆ ಜೈಲಿಗೆ ಹೋಗಲು ಯಾಕಿಷ್ಟು ಅವಸರ? ಸಚಿವ ಸಂಪುಟದ ಉಪಸಮಿತಿ ವರದಿ ಬಂದ ಮೇಲೆ ಕ್ರಮ ಆಗಲಿದೆ. ಈ ಸಂಬಂಧ ಎಸ್ಐಟಿ ರಚನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿ ವರು ಮಾಡುತ್ತಾರೆ. ಒಳ್ಳೆಯ ಅಧಿಕಾರಿ ನೇಮಿಸಿ ಎಸ್ಐಟಿ ರಚಿಸುತ್ತಾರೆ ಎಂದರು.