Advertisement

ಅಗತ್ಯವಿದ್ದರೆ ಇರಾನ್ ನಿಂದ ಭಾರತೀಯರ ಸ್ಥಳಾಂತರಕ್ಕೆ ಐಎನ್ ಎಸ್ ತ್ರಿಖಂಡ್ ರವಾನೆ

10:30 AM Jan 09, 2020 | Team Udayavani |

ನವದೆಹಲಿ: ಇರಾನ್ ರೆವಲ್ಯೂಷನರಿ ಮಿಲಿಟರಿ ಪಡೆಯ ಜನರಲ್ ಕಮಾಂಡರ್ ಖಾಸಿಂ ಸೊಲೆಮನಿಯನ್ನು ಅಮೆರಿಕ ವಾಯುಪಡೆ ಹತ್ಯೆಗೈದ ಪರಿಣಾಮ ಉಭಯ ದೇಶಗಳ ನಡುವೆ ಯುದ್ಧ ಸಂಘರ್ಷಕ್ಕೆ ಎಡೆಮಾಡಿಕೊಟ್ಟಿದೆ. ಏತನ್ಮಧ್ಯೆ ಒಂದು ವೇಳೆ ಅಗತ್ಯವಿದ್ದರೆ ಇರಾನ್ ನಿಂದ ಭಾರತೀಯರನ್ನು ಸ್ಥಳಾಂತರಿಸಲು ಐಎನ್ ಎಸ್ ತ್ರಿಖಂಡ್ ಅನ್ನು ಕಳುಹಿಸುವುದಾಗಿ ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

Advertisement

ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಳೆದ ವರ್ಷದ ನವೆಂಬರ್ ನಿಂದ ಭಾರತೀಯ ನೌಕಾ ಪಡೆಯ ಹಡಗು ಐಎನ್ ಎಸ್ ತ್ರಿಖಂಡ್ ಗಲ್ಫ್ ಆಫ್ ಒಮಾನ್ ನಲ್ಲಿದೆ. ಒಂದು ವೇಳೆ ಅಗತ್ಯವಿದ್ದರೆ ಇರಾನ್ ನಿಂದ ಭಾರತೀಯರನ್ನು ಸ್ಥಳಾಂತರಿಸಲು ತ್ರಿಖಂಡ್ ಅನ್ನು ಕಳುಹಿಸಲಾಗುವುದು ಎಂದು ತಿಳಿಸಿದರು.

ಅಮೆರಿಕ ಇರಾನ್ ನಡುವಿನ ಭೌಗೋಳಿಕ-ರಾಜಕೀಯ ಸಂಘರ್ಷದ ಪರಿಸ್ಥಿತಿ ಬಗ್ಗೆ ಸೂಕ್ಷ್ಮವಾಗಿ ಅವಲೋಕಿಸಲಾಗುತ್ತಿದೆ ಎಂದು ಈ ಸಂದರ್ಭದಲ್ಲಿ ಹೇಳಿದರು.

ಅಮೆರಿಕ ವಾಯುಪಡೆ ದಾಳಿ ನಡೆಸುವ ಮೂಲಕ ಇರಾನ್ ಜನರಲ್ ಕಮಾಂಡರ್ ಖಾಸಿಂ ಸೊಲೆಮನಿಯನ್ನು ಹತ್ಯೆಗೈದಿರುವ ಹಿನ್ನೆಲೆಯಲ್ಲಿ ಸಂಘರ್ಷಕ್ಕೆ ಎಡೆಮಾಡಿದೆ. ಆದರೆ ಉಭಯ ದೇಶಗಳು ಯುದ್ಧಕ್ಕೆ ಮುಂದಾಗದೆ ಮಾತುಕತೆ ಮೂಲಕ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕೆಂದು ಕೇಂದ್ರ ಸರ್ಕಾರ ಮನವಿ ಮಾಡಿಕೊಂಡಿರುವುದಾಗಿ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next