Advertisement

ನ್ಯಾಯಾಧೀಶರ ವಿರುದ್ಧ ಕ್ರಮಕ್ಕೆ ಒತ್ತಾಯ

11:33 AM Feb 09, 2022 | Team Udayavani |

ಕಲಬುರಗಿ: ರಾಯಚೂರು ಜಿಲ್ಲಾ ಸತ್ರ ನ್ಯಾಯಾಧೀಶರನ್ನು ಸೇವೆಯಿಂದ ವಜಾ ಗೊಳಿಸಬೇಕೆಂದು ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಮಂಗಳವಾರ ನಗರದಲ್ಲಿ ಪ್ರತಿಭಟನೆ ಮಾಡಲಾಯಿತು. ಅಖೀಲ ಕರ್ನಾಟಕ ಕೋಲಿ, ಕಬ್ಬಲಿಗ, ಬುಡಕಟ್ಟು ಪಂಗಡಗಳ ಸುಧಾರಣ ಸಮಿತಿ, ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಮತ್ತು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಜಿಲ್ಲಾ ಶಾಖೆ ನೇತೃತ್ವದಲ್ಲಿ ನಗರದ ಸರ್ದಾರ ವಲ್ಲಭಭಾಯಿ ಪಟೇಲ್‌ ವೃತ್ತದಿಂದ ಡಿಸಿ ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ನ್ಯಾಯಾಧಿಧೀಶರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ, ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

Advertisement

ಪ್ರತಿಭಟನೆಯಲ್ಲಿ ಕೋಲಿ, ಕಬ್ಬಲಿಗ, ಬುಡಕಟ್ಟು ಪಂಗಡಗಳ ಸುಧಾ ರಣಾ ಸಮಿತಿ ರಾಜ್ಯಾಧ್ಯಕ್ಷ ಲಚ್ಚಪ್ಪ ಜಮಾದಾರ, ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಮಹಾಂತೇಶ ಕೌಲಗಿ, ದಸಂಸ ಜಿಲ್ಲಾ ಸಂಘಟನಾ ಸಂಚಾಲಕ ಭೀಮಶಾ ಖನ್ನಾ, ಮುಖಂಡರಾದ ಭೀಮಣ್ಣ ಸಾಲಿ, ಬಸವರಾಜ ಹರವಾಳ, ಮಹಾದೇವ ಕೋಳಕೂರ, ಶಿವು ದಣ್ಣಿ, ಸಂತೋಷ ತಳವಾರ, ದೇವಿಂದ್ರಪ್ಪ ಅಣಕಲ್‌, ಹಣಮಂತ ಸುಂಟನೂರ, ರಾವುತಪ್ಪ, ಬಸವರಾಜ ಹರವಾಳ, ಅಮೃತ ಡಿಗ್ಗಿ, ನಿಂಗಪ್ಪ ಸಾಗನೂರ, ಮಲ್ಲಿಕಾರ್ಜುನ ಪೂಜಾರಿ, ಶರಣು ಜಮಾದಾರ, ಬಸು ಬಿದನೂರ, ಇನ್ನಿತರರು ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next