Advertisement

ಅಂಡರ್‌ಪಾಸ್‌ ನಿರ್ಮಿಸಲು ಒತ್ತಾಯ

06:36 AM Jun 03, 2020 | Suhan S |

ದಾವಣಗೆರೆ: ರಾಷ್ಟ್ರೀಯ ಹೆದ್ದಾರಿ ರಸ್ತೆ ಅಗಲೀಕರಣ ಸಂಬಂಧ ಅಡ್ಡಿಪಡಿಸುತ್ತಿರುವ ಕುರಿತು ಕಲ್ಪನಹಳ್ಳಿ, ಮಲ್ಲಶೆಟ್ಟಿಹಳ್ಳಿ, ಹೊನ್ನೂರು ಮತ್ತು ಲಕ್ಕಮುತ್ತೇನಹಳ್ಳಿ ಇತರೆಡೆ ಮಂಗಳವಾರ ಭೇಟಿ ನೀಡಿದ ಜಿಲ್ಲಾಧಿಕಾರಿ ಮಹಾಂತೇಶ್‌ ಜಿ. ಬೀಳಗಿ ಸಾರ್ವಜನಿಕ ಅಹವಾಲು ಆಲಿಸಿದರು.

Advertisement

ಕಲ್ಪನಹಳ್ಳಿ, ಮಲ್ಲಶೆಟ್ಟಿಹಳ್ಳಿ, ಹೊನ್ನೂರು ಮತ್ತು ಲಕ್ಕಮುತ್ತೇನಹಳ್ಳಿ ಬಳಿ ಹೊಸದಾಗಿ ಅಂಡರ್‌ಪಾಸ್‌ ನಿರ್ಮಿಸುವ ಕುರಿತಂತೆ ಸಾರ್ವಜನಿಕರ ಅಹವಾಲು ಹಾಗೂ ಕಾಮಗಾರಿ ಸ್ಥಗಿತಗೊಂಡಿರುವ ಕಾರಣಕ್ಕಾಗಿ ಸ್ಥಳ ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಉತ್ತಮ ದರ್ಜೆಯ ಮತ್ತು ವಿಶಾಲವಾದ ಅಂಡರ್‌ಪಾಸ್‌ ನಿರ್ಮಿಸುವಂತೆ ಗ್ರಾಮಸ್ಥರು ಒತ್ತಾಯಿಸಿದರು. ರಾಷ್ಟ್ರೀಯ ಹೆದ್ದಾರಿ ಪ್ರಾಧಿ ಕಾರದ ನಿಯಮಗಳಂತೆ ಈ ಹಂತದಲ್ಲಿ ಗ್ರಾಮಸ್ಥರ ಬೇಡಿಕೆಗೆ ತಕ್ಕಂತೆ ವಿಶಾಲವಾದ ಅಂಡರ್‌ಪಾಸ್‌ ನಿರ್ಮಿಸಲು ಅವಕಾಶ ಇಲ್ಲ ಎಂಬ ವಿಷಯನ್ನು ಗ್ರಾಮಸ್ಥರಿಗೆ ಮನವರಿಕೆ ಮಾಡಿಕೊಟ್ಟರು. ಕಲ್ಪನಹಳ್ಳಿ, ಮಲ್ಲಶೆಟ್ಟಿಹಳ್ಳಿ ಬಳಿ ಕಾಮಗಾರಿಯನ್ನು ಕೂಡಲೇ ಮುಕ್ತಾಯಗೊಳಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲಾ ರಕ್ಷಣಾಧಿಕಾರಿ ಹನುಮಂತರಾಯ, ಉಪವಿಭಾಗಾಧಿಕಾರಿ ಡಾ| ಮಮತಾ ಹೊಸಗೌಡರ್‌, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು,ಗುತ್ತಿಗೆದಾರರು, ಕಂದಾಯ ಅಧಿಕಾರಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next