Advertisement

ಶುದ್ಧ ಕುಡಿಯುವ ನೀರು ಒದಗಿಸಲು ಆಗ್ರಹಿಸಿ ಧರಣಿ

12:41 PM Jun 04, 2018 | Team Udayavani |

ನಾರಾಯಣಪುರ: ಗ್ರಾಮಕ್ಕೆ ಶುದ್ಧ ಕುಡಿಯುವ ನೀರು ಪೂರೈಸುವಂತೆ ಕಳೆದೆರಡು ತಿಂಗಳಿನಿಂದ ಗ್ರಾಪಂ ಅಧಿಕಾರಿಗಳ ಗಮನಕ್ಕೆ ತಂದರು ಕೂಡ ಯಾವುದೇ ಕ್ರಮವಹಿಸದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಮತ್ತು ವಿವಿಧ ಸಂಘಟನೆಗಳು ಗ್ರಾಪಂ ಕಾರ್ಯಾಲಯಕ್ಕೆ ಬೀಗ ಜಡೆದು ಪ್ರತಿಭಟನೆ ನಡೆಸಿರುವ ಘಟನೆ ಜೋಗುಂಡಬಾವಿ ಗ್ರಾಮದಲ್ಲಿ ನಡೆದಿದೆ.

Advertisement

ಸಮೀಪದ ಜೋಗುಂಡಬಾವಿ ಗ್ರಾಮದಲ್ಲಿ ಹಲವು ವರ್ಷಗಳಿಂದ ಗ್ರಾಮದಲ್ಲಿನ ಸೇದು ಬಾವಿ ಮೂಲಕ
ನಿತ್ಯ ಸರಬರಾಜು ಆಗುವ ನಲ್ಲಿ ನೀರಿನಲ್ಲಿ ಹುಳ ಮತ್ತು ಕಲ್ಮಶ ನೀರು ಪೂರೈಕೆ ಆಗುತ್ತಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.

ಆದ್ದರಿಂದ ಗ್ರಾಮಕ್ಕೆ ನೀರು ಪೂರೈಕೆ ಮಾಡುವ ಬಾವಿಯನ್ನು ಸ್ವಚ್ಚಗೊಳಿಸಿ ಶುದ್ಧ ಕುಡಿಯುವ ನೀರು ಪೂರೈಸಿ ಎಂದು ಅಧಿಕಾರಿಗಳಿಗೆ ಸಾಕಷ್ಟು ಸಲ ಗಮನಕ್ಕೆ ತಂದಿದ್ದೇವೆ. ಆದರೂ ಕ್ರಮ ಕೈಗೊಂಡಿಲ್ಲ. ಮನವಿಗೂ ಸ್ಪಂದಿಸದ ಗ್ರಾಪಂ ಅಧಿಕಾರಿಗಳು ನಿರ್ಲಕ್ಷ್ಯಕ್ಕೆ ಮೇಲಧಿಕಾರಿಗಳು ಕಠಿಣ ಕ್ರಮ
ಕೈಗೊಳ್ಳಬೇಕು ಎಂದು ಗ್ರಾಮದ ಯುವಕರುಆಗ್ರಹಿಸಿದ್ದಾರೆ.

ಈ ವೇಳೆ ಸ್ನೇಹ ಚಿರಾಯು ಸಂಘದ ಅಧ್ಯಕ್ಷ ಬಸವರಾಜ ಮಾತನಾಡಿ, ಗ್ರಾಮಕ್ಕೆ ನೀರು ಪೂರೈಕೆ ಮಾಡುವ ಬಾವಿಯಿಂದ ಸರಬರಾಜು ಮಾಡುವ ನೀರಿನಲ್ಲಿ ಸಣ್ಣ ಗಾತ್ರದ ಹುಳ ಬರುತ್ತಿವೆ. ಈ ಕುರಿತು ಹಲವು ಬಾರಿ ಗ್ರಾಪಂ ಅಧಿಕಾರಿಗಳಿಗೆ ಬಾವಿ ಸ್ವಚ್ಚಗೊಳಿಸಿ ಇಲ್ಲವೆ ಗ್ರಾಮಕ್ಕೆ ಪರ್ಯಾಯ ಕುಡಿಯುವ ನೀರಿನ ವ್ಯವಸ್ಥೆ ಮಾಡುವಂತೆ ಗಮನಕ್ಕೆ ತಂದರು ಯಾವುದೇ ಪ್ರಯೋಜನವಾಗಿಲ್ಲ. ಇದರಿಂದಾಗಿ ಗ್ರಾಮದಲ್ಲಿ ಸಾಂಕ್ರಾಮಿಕ ರೋಗ ಭೀತಿ ಎದುರಾಗುವ ಸಾಧ್ಯತೆಗಳಿವೆ ಎಂದು ಹೇಳಿದ ಅವರು, ಗ್ರಾಮಕ್ಕೆ ಪರ್ಯಾಯವಾಗಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು ಹಾಗೂ ಶುದ್ಧ ಕುಡಿಯುವ ನೀರಿಗಾಗಿ ಶುದ್ಧೀಕರಣ ಘಟಕವನ್ನು ಕೂಡಲೇ ಸ್ಥಾಪಿಸಬೇಕು ಎಂದು ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ಸ್ಥಳಕ್ಕೆ ಆಗಮಿಸಿದ ಗ್ರಾಪಂ ಅಧ್ಯಕ್ಷರು ಪ್ರತಿಭಟನಾನಿರತರೊಂದಿಗೆ ಮಾತುಕತೆ ನಡೆಸಿ, ಎರಡು ದಿನಗಳಲ್ಲಿ ಸಮಸ್ಯೆ ಪರಿಹಾರ ನೀಡುವುದಾಗಿ ಭರವಸೆ ನೀಡಿದ ನಂತರವೇ ಪ್ರತಿಭಟನೆಯನ್ನು ಹಿಂಪಡೆಯಲಾಗಿದೆ. ಸ್ನೇಹ ಚಿರಾಯು ಸಂಘಟನೆ ಪದಾಧಿಕಾರಿಗಳು ಗ್ರಾಮದ
ಯುವಕರು, ಗ್ರಾಮಸ್ಥರು ಇದ್ದರು. 

Advertisement
Advertisement

Udayavani is now on Telegram. Click here to join our channel and stay updated with the latest news.

Next