ಹೊಸಪೇಟೆ: ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ನಾನಾ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ, ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದಿಂದ ನಗರದ ತಹಶೀಲ್ದಾರ್‌ರ ಕಚೇರಿ ಆವರಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.
ರಾಜ್ಯ ಸರಕಾರದ ಆರೋಗ್ಯ ಕ್ಷೇತ್ರದ ಬಜೆಟ್ ಶೇಕಡವಾರು ಹೆಚ್ಚಿಸಬೇಕು ಮತ್ತು ಈ ಕ್ಷೇತ್ರಕ್ಕೆ ಪ್ರಾಮುಖ್ಯತೆ ನೀಡುವ ಜತೆಗೆಅಗತ್ಯವಿರುವ ನೆರವನ್ನು ಕೇಂದ್ರ ಸರಕಾರವು ನೀಡಬೇಕು. ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಅಭಿವೃದ್ಧಿಗೆ ಆದ್ಯತೆ ನೀಡಲು ಕ್ರಮವಹಿಸಬೇಕು. ಗುತ್ತಿಗೆ ಹೊರಗುತ್ತಿಗೆ ನೌಕರರಿಗೆ ಸೇವಾ ಭದ್ರತೆಯನ್ನು ಒದಗಿಸಿ, ಕಾಯಂಗೊಳಿಸಬೇಕು. ಎಲ್ಲಾ ಹುದ್ದೆಗಳಿಗೆ ವೇತನ ಭತ್ಯೆಗಳು ಮತ್ತು ವೇತನ ಶ್ರೇಣಿಯನ್ನು ನೀಡಿ, ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು ಎಂದು ಆಗ್ರಹಿಸಿದರು.
ಹರಿಯಾಣ ಮಾದರಿಯಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಯು ಜಾರಿ ಮಾಡಿರುವ ಏಕರೂಪ ವೇತನದ ಮಾದರಿಯಲ್ಲಿ ನಮ್ಮ ರಾಜ್ಯದ ಎಲ್ಲ ನೌಕರರಿಗೂ ಜಾರಿಮಾಡಲು ಕ್ರಮ ವಹಿಸಬೇಕು. ಎನ್‌ಎಚ್‌ಎಂ ಅಡಿಯಲ್ಲಿ ಕೆಲಸ ಮಾಡುವ ನೌಕರರಿಗೆ ಕೇಂದ್ರ ಸರಕಾರ ನೀಡುತ್ತಿರುವ ಬೋನಸ್ ಹೆಚ್ಚಳವನ್ನು ಕಾರ್ಯಗತಗೊಳಿಸಬೇಕು. ಆರೋಗ್ಯ ಭಾಗ್ಯ ಯೋಜನೆಯನ್ನು ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರಿಗೂ ವಿಸ್ತರಿಸಬೇಕು. ನಮ್ಮ ಸಂಘದ ಅಧಿಕೃತ ಮುಷ್ಕರದ ದಿನಗಳಲ್ಲಿ ಕಡಿತವಾದ ವೇತನವನ್ನು ಪಾವತಿಸಲು ಕ್ರಮ ಕೈಗೊಳ್ಳಬೇಕು ಮತ್ತು ನೌಕರರ ಕಲ್ಯಾಣ ನಿ ಅಥವಾ ಕಲ್ಯಾಣ ಮಂಡಳಿ ಸ್ಥಾಪಿಸಲು ಕ್ರಮ ಜರುಗಿಸಬೇಕು ಒತ್ತಾಯಿಸಿದರು.
ಸರಕಾರಿ ನೌಕರರು ಹಾಗೂ ಗುತ್ತಿಗೆ ನೌಕರರು ಮಾಡುವ ಕಾರ್ಯವನ್ನು ಯಾಗಿದ್ದರು ವೇತನದಲ್ಲಿ ತಾರತಮ್ಯ ಮಾಡಲಾಗುತ್ತಿದೆ ಹಾಗಾಗಿ ಸಮಾನ ಕೆಲಸಕ್ಕೆ ಸಮಾನ ವೇತನ. ಅರೋಗ್ಯ ಸಹಾಯಕರನ್ನು ಕೋವಿಡ್ ವಾರಿಯರ್ಸ ಎಂದು ಕೂಡಲೇ ಸರಕಾರ ಪರಿಗಣಿಸಬೇಕು ಎಂದು ಒತ್ತಾಯಿಸಿದರು. ಆರೋಗ್ಯ ಇಲಾಖೆಯ ಆರೋಗ್ಯ ಸಹಾಯಕ ಧರ್ಮನಗೌಡ, ಆರೋಗ್ಯ ಶಿಕ್ಷಣಾಧಿ ಕಾರಿ ಎಂ.ಪಿ. ದೊಡ್ಡಮನಿ, ಸಂಘದ ಅಧ್ಯಕ್ಷ ಡಾ| ಪ್ರವೀಣ್, ಉಪಾಧ್ಯಕ್ಷೆ ನೀರಾ ಎವಿಲಿನ್, ಪದಾ ಧಿಕಾರಿಗಳಾದ ಡಾ| ನಾಗರತ್ನಮ್ಮ, ಡಾ| ಅನುರಾಧ, ಡಾ| ದೀಲಿಪ್, ಮಂಜುನಾಥ, ಸಹಾದೇವ, ಜಗದೀಶ್, ಓಂಕಾರ, ಮಾರೇಶ್, ಉಮಾದೇವಿ, ಸುಧಾ, ಅನಿತಾ, ಶಿವಮೂರ್ತಿ ಮತ್ತಿತರರಿದ್ದರು.