ಮಾಡುವಂತೆ ಒತ್ತಾಯಿಸಿ ಕರ್ನಾಟಕ ಬೆಳೆಗಾರರ ಒಕ್ಕೂಟ, ರೈತ ಸಂಘ ಮತ್ತು ಹಸಿರು ಸೇನೆ ಕಾರ್ಯಕರ್ತರು ನಗರದ ಲೀಡ್ ಬ್ಯಾಂಕ್ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.
Advertisement
ತಾಲೂಕು ಕಚೇರಿ ಆವರಣದಿಂದ ಮೆರವಣಿಗೆ ನಡೆಸಿದ ಕಾರ್ಯಕರ್ತರು ಬ್ಯಾಂಕ್ ಎದುರು ಕೆಲಕಾಲ ಧರಣಿ ನಡೆಸಿಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಬಿ.ಎಸ್. ಜಯರಾಮ್, ಕಳೆದ ನಾಲ್ಕು ವರ್ಷಗಳ ಸತತ ಬರಗಾಲದಿಂದ ರೈತರು ಮತ್ತು ಎಲ್ಲ ಬೆಳೆಗಾರರು ಕಂಗೆಟ್ಟಿದ್ದಾರೆ. ಎಲ್ಲ ಬೆಳೆಗಳೂ ನಾಶವಾಗಿ ಬ್ಯಾಂಕಿನಿಂದ ಪಡೆದ ಸಾಲ ತೀರಿಸಲಾಗದೆ ಮರ್ಯಾದೆಗೆ
ಅಂಜಿ ಆತ್ಮಹತ್ಯೆಯ ಹಾದಿ ತುಳಿಯುತ್ತಿದ್ದಾರೆ ಎಂದರು.
ಐಷಾರಾಮಿಯಾಗಿ ಬದುಕುತ್ತಿರುವ ಉದ್ದಿಮೆದಾರರ ಸಾಲವನ್ನು ಮನ್ನಾ ಮಾಡುತ್ತಿರುವ ಕೇಂದ್ರ ಸರ್ಕಾರ
ಸಾಲದ ಸುಳಿಯಲ್ಲಿ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರೂ ರೈತರತ್ತ ತಿರುಗಿ ನೋಡುತ್ತಿಲ್ಲ ಎಂದು ದೂರಿದರು.
ಕೆಜಿಎಫ್ ಸಂಘಟನಾ ಕಾರ್ಯದರ್ಶಿ ಡಿ.ಎಂ. ವಿಜಯ್ ಮಾತನಾಡಿ, ಕಳೆದ ವರ್ಷ ಬೆಳೆ ವಿಮೆಯಡಿ ಪ್ರತಿ ರೈತರಿಂದ 12 ಸಾವಿರ ರೂ. ಪಡೆದಿರುವ ಕೇಂದ್ರ ಸರ್ಕಾರ ಇದುವರೆಗೂ ಬೆಳೆ ನಷ್ಟಕ್ಕೆ ಯಾವುದೇ ಪರಿಹಾರ ನೀಡಿಲ್ಲ ಎಂದು ಆರೋಪಿಸಿದರು. ಕೇಂದ್ರ ಸರ್ಕಾರ ರೈತರ ಬದುಕಿನ ಜೊತೆ ಚೆಲ್ಲಾಟವಾಡುವುದನ್ನು ಮತ್ತು ರಾಜಕಾರಣ ಮಾಡುವುದನ್ನು ಬಿಡಬೇಕು.
ಈಗಾಗಲೇ ಐವತ್ತು ಸಾವಿರ ರೂ. ಸಾಲ ಮನ್ನಾ ಮಾಡಿರುವ ರಾಜ್ಯ ಸರ್ಕಾರದ ಮಾದರಿಯಲ್ಲಿ ಕೃಷಿಕರ ಸಂಪೂರ್ಣ ಸಾಲ ಮನ್ನಾ ಮಾಡಬೇಕು ಎಂದು ಆಗ್ರಹಿಸಿದರು.
Related Articles
ಸಮಸ್ಯೆಗಳನ್ನು ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿಕೊಡುವ ಭರವಸೆ ದೊರೆತ ಹಿನ್ನೆಲೆಯಲ್ಲಿ ಪ್ರತಿಭಟನೆ
ಹಿಂಪಡೆಯಲಾಯಿತು.
Advertisement
ಕೆಜಿಎಫ್ ಉಪಾಧ್ಯಕ್ಷ ರತೀಶ್, ಆಲ್ದೂರು ಕಾಫಿ ಬೆಳೆಗಾರರ ಸಂಘದ ಅಧ್ಯಕ್ಷ ಸಿ.ಎ. ಸುರೇಶ್, ಲಿಂಗಪ್ಪಗೌಡ,ಮಹೇಶ್, ರೈತ ಸಂಘ, ಹಸಿರು ಸೇನೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಟಿ.ಎ. ಮಂಜುನಾಥ್, ಮಹಿಳಾ ಘಟಕದ
ಅಧ್ಯಕ್ಷೆ ಹಾಲಮ್ಮ, ರಾಜ್ಯ ಉಪಾಧ್ಯಕ್ಷೆ ವನಶ್ರೀ, ಮುಖಂಡ ಕೆ.ಕೆ. ಕೃಷ್ಣೇಗೌಡ, ಜಿಲ್ಲಾಧ್ಯಕ್ಷ ಎಂ.ಸಿ. ಬಸವರಾಜ್
ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.