Advertisement

ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯ

12:24 PM Feb 19, 2020 | Suhan S |

ಬೆಳಗಾವಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ನಿಗಮ, ವಾಯುವ್ಯ ಕರ್ನಾಟಕ ಸಾರಿಗೆ ನಿಗಮ, ಮತ್ತು ಈಶಾನ್ಯ ಕರ್ನಾಟಕ ಸಾರಿಗೆ ನಿಗಮದ ನೌಕರರನ್ನು ಸರಕಾರಿ ನೌಕರರನ್ನಾಗಿ ರಿಗಣಿಸಬೇಕು ಎಂದು ಆಗ್ರಹಿಸಿ ಅಖೀಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಮಹಾಮಂಡಳದ ಸದಸ್ಯರು ಮಂಗಳವಾರ ಬೆಳಗಾವಿಯಲ್ಲಿ ಧರಣಿ ನಡೆಸಿದರು.

Advertisement

ಆರನೇ ವೇತನ ಆಯೋಗದ ಶಿಫಾರಸ್ಸಿನಂತೆ ರಾಜ್ಯ ಸರಕಾರ ಕಾರ್ಮಿಕರು ಹಾಗೂ ನೌಕರರಿಗೆ ವೇತನ ಪರಿಷ್ಕರಣೆ ಮಾಡಿದೆ. ಅದರಂತೆ ಈ ವೇತನ ಶ್ರೇಣಿಯನ್ನು ನಮ್ಮ ಕಾರ್ಮಿಕರು ಹಾಗೂ ನೌಕರರಿಗೂ ನೀಡಬೇಕು ಎಂದು ಆಗ್ರಹಿಸಿದರು. ವೇತನ ತಾರತಮ್ಯವನ್ನು ಕೂಡಲೇ ಸರಿಪಡಿಸಬೇಕು. ಸರಕಾರಿ ನೌಕರರಿಗೆ ನೀಡು ತ್ತಿರುವ ಎಲ್ಲ ಸವಲತ್ತುಗಳನ್ನು ನಮಗೂ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಈ ವೇಳೆ ಮಾತನಾಡಿದ ಅಖೀಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಮಹಾಮಂಡಳದ ರಾಜ್ಯಾಧ್ಯಕ್ಷ ಡಾ.ಕೆ.ಎಸ್‌.ಶರ್ಮಾ ಅವರು ಈಗಾಗಲೇ ಎಲ್ಲ ಶಾಸಕರು ಹಾಗೂ ಸಚಿವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದೇವೆ. ಹೀಗಾಗಿ ನಮ್ಮ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು ಎಂದು ಒತ್ತಾಯಿಸಿದರು. ಗಂಗಾಧರಯ್ಯ, ಎನ್‌.ಆರ್‌.ದೇವರಾಜೇ ಅರಸು, ಪ್ರಧಾನ ಕಾರ್ಯದರ್ಶಿ ಜಿ.ಜಿ.ದೇವರಾಜೇ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next