Advertisement

ಗೌರವಧನ ಹೆಚ್ಚಳಕ್ಕಾಗಿ ಒತ್ತಾಯ

05:09 AM Jul 02, 2020 | Lakshmi GovindaRaj |

ಮಂಡ್ಯ: ಆಶಾ ಕಾರ್ಯಕರ್ತೆಯರಿಗೆ 12 ಸಾವಿರ ಗೌರವಧನ ನಿಗದಿಪಡಿಸಿ, ಅಗತ್ಯವಿರುವಷ್ಟು ಆರೋಗ್ಯ ರಕ್ಷಣಾ ಸಾಮಗ್ರಿಗಳನ್ನು ಕಲ್ಪಿಸಲು ಆಗ್ರಹಿಸಿ  ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದವರು ಪ್ರತಿಭಟನೆ ನಡೆಸಿದರು.  ಡೀಸಿ ಕಚೇರಿ ಎದುರು ಜಮಾಯಿಸಿದ ಆಶಾ ಕಾರ್ಯಕರ್ತೆಯರು ಧರಣಿ ನಡೆಸಿ, ಸರ್ಕಾರಕ್ಕೆ ಜಿಲ್ಲಾಡ ಳಿತದ ಮೂಲಕ ಮನವಿ ಸಲ್ಲಿಸಿದರು.

Advertisement

ಪ್ರತಿ ಆಶಾ ಕಾರ್ಯಕರ್ತೆಗೆ 8ರಿಂದ 9 ಸಾವಿರ ರೂ.ಗೌರವ ಧನ ನೀಡಲಾಗುತ್ತಿದೆ.  ಪ್ರೋತ್ಸಾಹಧನದ ವಿವಿಧ ಕೆಲಸಗಳ ಹಣವನ್ನು ಮತ್ತು ಗೌರವಧನದ ಹಣವನ್ನು ಬಿಡಿ ಬಿಡಿಯಾಗಿ ಪೋರ್ಟಲ್‌ನಲ್ಲಿ ದಾಖಲು ಮಾಡಬೇಕಿರುವುದರಿಂದ ಈ ಹಣ ಸರಿ ಯಾಗಿ ಕಾರ್ಯಕರ್ತೆಯರಿಗೆ ತಲುಪುತ್ತಿಲ್ಲ. ಈ ಬಗ್ಗೆ ಹಲವು ಬಾರಿ  ಇಲಾಖೆ ಗಮನಕ್ಕೆ ತಂದರೂ ಸಮಸ್ಯೆ ಬಗೆಹರಿದಿಲ್ಲ.

ಪ್ರೋತ್ಸಾಹಧನ ಮತ್ತು ಗೌರವಧನ ಎರಡ ನ್ನೂ ಒಟ್ಟಿಗೆ ಸೇರಿಸಿ ಒಂದೇ ನಿಶ್ಚಿತ ಗೌರವಧನವಾಗಿ 12 ಸಾವಿರ ರೂ. ನೀಡುವಂತೆ ಒತ್ತಾಯಿಸಿದರು. ಆಶಾ ಕಾರ್ಯಕರ್ತೆಯರು ತಮ್ಮ  ಜೀವನವನ್ನು ಅಪಾಯಕ್ಕೆ ಒಡ್ಡಿಕೊಂಡು ಸೋಂಕು ನಿಯಂತ್ರಣ ಕೆಲಸ ದಲ್ಲಿ ಸೋಂಕಿತ ಜನರ ನಡುವೆ ಅವಿರತವಾಗಿ ಹೋರಾಡುತ್ತಿದ್ದಾರೆ. ಈ ಸಮಯದಲ್ಲಿ ಕಾರ್ಯಕರ್ತೆಯರ ಆರೋಗ್ಯ ರಕ್ಷಣೆ ಸರ್ಕಾರದ ಜವಾಬ್ದಾರಿಯಾಗಿದೆ.

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕಾರ್ಯಕರ್ತೆಯರಿಗೆ ಬೇಕಾದಷ್ಟು ಮಾಸ್ಕ್, ಫೇಸ್‌ ಶೀಲ್ಡ್‌, ಹ್ಯಾಂಡ್‌ ಗ್ಲೌಸ್‌, ಸ್ಯಾನಿಟೈಸರ್‌ ಸೇರಿದಂತೆ ಇನ್ನಿತರ ಆರೋಗ್ಯ ರಕ್ಷಣಾ ಸಾಮಗ್ರಿಗಳನ್ನು ನೀಡಲಾಗಿಲ್ಲ. ಆಶಾ ಕಾರ್ಯಕರ್ತೆಯರ ಆರೋಗ್ಯ  ರಕ್ಷಿಸುವ ಎಲ್ಲಾ ಸಾಮಗ್ರಿಗಳನ್ನು ಸಾಕಷ್ಟು ಪ್ರಮಾಣದಲ್ಲಿ ನೀಡುವಂತೆ ಆಗ್ರಹಿಸಿದರು. ಸಂಘದ ಶೋಭಾ, ನಾಗರತ್ನ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next