Advertisement

ಹಳೆ ಪಿಂಚಣಿ ವ್ಯವಸ್ಥೆ ಜಾರಿಗೆ ಒತ್ತಾಯ

11:36 AM Nov 18, 2019 | Suhan S |

ಬೆಳಗಾವಿ: ಎನ್‌ಪಿಎಸ್‌ ರದ್ದುಗೊಳಿಸಿ ಹಳೆಯ ಪಿಂಚಣಿ ವ್ಯವಸ್ಥೆಯನ್ನು ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ನೌಕರರ ಹೋರಾಟ ಸಮನ್ವಯ ಸಮಿತಿ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳ ನೇತೃತ್ವದಲ್ಲಿ ಶಿಕ್ಷಕೇತರ ಸಿಬ್ಬಂದಿ ಪ್ರತಿಭಟನೆ ನಡೆಸಿದರು.

Advertisement

ಕಾಲ್ಪನಿಕ ವೇತನ ಬಡ್ತಿ ಕುರಿತು ಬಸವರಾಜ ಹೊರಟ್ಟಿ ನೀಡಿದ ವರದಿಯನ್ನು ಯಥಾವತ್ತಾಗಿ ಜಾರಿಗೆ ತರಬೇಕು. ಅನುದಾನಿತ ಪ್ರೌಢಶಾಲೆಗಳಲ್ಲಿ ಹಾಗೂ ಕಾಲೇಜುಗಳಲ್ಲಿ ಖಾಲಿ ಹುದ್ದೆಗಳ ಭರ್ತಿ ಮಾಡಬೇಕು. ಜ್ಯೋತಿ ಸಂಜೀವಿನಿ ಅನುದಾನಿ ಶಾಲಾ-ಕಾಲೇಜು ನೌಕರರಿಗೆ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು. 1995ರ ನಂತರ ಪ್ರಾರಂಭವಾದ ಶಾಲಾ- ಕಾಲೇಜುಗಳಿಗೆ ಅನುದಾನ ನೀಡಬೇಕು. ಎನ್‌ಪಿಎಸ್‌ ರದ್ದು ಮಾಡಿ ಹಳೆಯ ಪಿಂಚಣಿ ವ್ಯವಸ್ಥೆ ಜಾರಿಗೆ ತರಬೇಕು. ವಿಭಾಗದಿಂದ ವಿಭಾಗಕ್ಕೆ ವರ್ಗಾವಣೆ ಹೊಂದಿದ ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರಿಗೆ ಸೇವೆಗೆ ಸೇರಿದ ದಿನಾಂಕದಿಂದ ಜೇಷ್ಠತೆ ಪರಿಗಣಿಸಬೇಕು ಎಂದು ಒತ್ತಾಯಿಸಿದರು.

ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಸ್ವಾಮೀಜಿ ಮಾತನಾಡಿ, ಅನುದಾನಿತ ಶಾಲೆ ಹಾಗೂ ಕಾಲೇಜುಗಳಲ್ಲಿ ಹಲವು ವರ್ಷಗಳಿಂದ ಖಾಲಿ ಇರುವ ಶಿಕ್ಷಕ ಹಾಗೂ ಶಿಕ್ಷಕೇತರ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು. 2017, ಸೆಪ್ಟಂಬರ್‌ 6ರಂದು ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ನೇತೃತ್ವದಲ್ಲಿ ವಿಧಾನಸೌಧ ಎದುರು ಅಹೋರಾತ್ರಿ ಪ್ರತಿಭಟನೆ ನಡೆಸಲಾಗಿತ್ತು. ಮುಖ್ಯಮಂತ್ರಿ ಸಭೆ ನಡೆಸಿ ಖಾಸಗಿ ಶಿಕ್ಷಣ ಸಂಸ್ಥೆಗಳ ಹಾಗೂ ಅಧಿಕಾರಿಗಳ ಸಭೆ ಕರೆದು ಚರ್ಚಿಸಿ ಸಮಸ್ಯೆ ಪರಿಹರಿಸುವುದಾಗಿ ಭರವಸೆ ನೀಡಿದ್ದರು. ಆದರೆ ಆ ಭರವಸೆ ಇನ್ನೂವರೆಗೆ ಈಡೇರಿಲ್ಲ. ತಕ್ಷಣ ಖಾಸಗಿ ಶಿಕ್ಷಣ ಸಂಸ್ಥೆಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಒತ್ತಾಯಿಸಿದರು.

ಶ್ರೀ ನೀಲಕಂಠ ಸ್ವಾಮೀಜಿ, ಶ್ರೀ ಅಭಿನವ ಬ್ರಹ್ಮಾನಂದ ಸ್ವಾಮೀಜಿ, ಶ್ರೀ ಮಹಾಂತ ದೇವರು, ಎಸ್‌.ಎಸ್‌. ಮಠದ, ಎಂ.ಎ. ಕೋರಿಶೆಟ್ಟಿ, ಆರ್‌.ಎಂ. ಸನದಿ, ರಾಮು ಗಗವಾಡ, ಸಲಿಂ ಕಿತ್ತೂರ, ವಿ.ಬಿ. ಹೊಸೂರ, ಕೆ.ಬಿ. ಹಿರೇಮಠ, ಪಿ.ಪಿ. ಬೆಳಗಾಂವಕರ, ಡಿ.ಬಿ. ನದಾಫ್‌ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next