Advertisement
ಭಾನುವಾರ ಲಾಕ್‌ಡೌನ್ ಜಾರಿ ಮಾಡುತ್ತಿರುವ ಮಾದರಿಯಲ್ಲೇ ಶನಿವಾರವೂ ಲಾಕ್ ಡೌನ್ ಘೋಷಣೆ ಮಾಡುವಂತೆ ಪಾಲಿಕೆ ಸದಸ್ಯರು ಮನವಿ ಮಾಡಿದ್ದು, ಸಿಎಂ ಯಡಿಯೂರಪ್ಪ ಅವರ ಗಮನಕ್ಕೆ ತರಲಾಗುವುದು ಎಂದು ತಿಳಿಸಿದರು. ಲಾಕ್‌ಡೌನ್ ತಡೆಯುವ ನಿಟ್ಟಿನಲ್ಲಿ ಎಲ್ಲ ಪಾಲಿಕೆ ಸದಸ್ಯರೊಂದಿಗೆ ಸಭೆ ನಡೆಸಲಾಗುತ್ತಿದ್ದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಉದ್ದೇಶದಿಂದ ಸೋಮವಾರ ಮತ್ತು ಮಂಗಳವಾರ ಸಭೆ ನಡೆಸಲಾಗುತ್ತಿದೆ. ಪಾಲಿಕೆ ಸದಸ್ಯರು ಆಯಾ ವಾರ್ಡ್‌ಗಳಲ್ಲಿ ಸಕ್ರಿಯವಾಗಿ ಕೆಲಸ ಮಾಡಬೇಕು. ಸದ್ಯ ತುರ್ತು ಪರಿಸ್ಥಿತಿ ಇದೆ. ಹೀಗಾಗಿ, ಎಲ್ಲರು ಪಕ್ಷಾತೀತವಾಗಿ ಸಹಕಾರ ನೀಡಿದರೆ ಮಾತ್ರಕೋವಿಡ್ 19 ವಿರುದ್ಧ ಹೋರಾಡಲು ಸಾಧ್ಯ ಎಂದರು.
Related Articles
Advertisement
ಬಹಳಷ್ಟು ಸ್ವಯಂ ಸೇವಾ ಸಂಘಟನೆ ಗಳು ಸರ್ಕಾರಕ್ಕೆ ಸೇವೆ ನೆರವು ನೀಡಲು ಮುಂದೆ ಬಂದಿವೆ. ಅವರನ್ನು ಯಾವ ರೀತಿ ಬಳಕೆ ಮಾಡಿಕೊಳ್ಳಬೇಕು ಎಂದು ಚರ್ಚೆ ಮಾಡುತ್ತಿದ್ದೇವೆ. ಇನ್ನು ಸಚಿವರಾದ ಡಾ. ಸುಧಾಕರ್, ಶ್ರೀರಾಮುಲು ಮತ್ತು ತಮ್ಮ ನಡುವೆ ಸ್ವಾಮರಸ್ಯ ಇಲ್ಲ ಎನ್ನುವುದು ಸುಳ್ಳು. ನಾನು ಇಪ್ಪತ್ತೆ„ದು ಮೂವತ್ತು ವರ್ಷಗಳಿಂದ ರಾಜಕಾರಣದಲ್ಲಿ ಇದ್ದೇನೆ. ಹಾಸಿಗೆ ಇದ್ದಷ್ಟು ಕಾಲು ಚಾಚುವ ಸ್ವಭಾವ ನನ್ನದು. ಎಲ್ಲರೊಂದಿಗೆ ಹೊಂದಾಣಿಕೆ ಮಾಡಿಕೊಂಡು ಹೋಗುವ ಸ್ವಭಾವ ನನ್ನದು ಎಂದು ಹೇಳಿದರು.
ಕರೆದಿದ್ದು 75; ಬಂದಿದ್ದು 35!: ಕೋವಿಡ್ 19 ಸೋಂಕು ತಡೆಯುವ ನಿಟ್ಟಿನಲ್ಲಿ ಆಯ್ದ 70 ವಾರ್ಡ್‌ಗಳ ಪಾಲಿಕೆ ಸದಸ್ಯರನ್ನು ಸೋಮವಾರ ಸಭೆಗೆ ಕರೆಯಲಾಗಿತ್ತು. ಆದರೆ, ಇದಕ್ಕೆ ಕೇವಲ 35ಜನ ಪಾಲಿಕೆ ಸದಸ್ಯರು ಹಾಜರಾಗಿದ್ದರು. ಸಭೆಯಲ್ಲಿ ಹಲವು ಗಂಭೀರ ವಿಚಾರಗಳು ಚರ್ಚೆಯಾಗಿವೆ.
ಚಿಕಿತ್ಸೆ ನಿರಾಕರಿಸಿಲ್ಲ: ಬೆಂಗಳೂರಿನ ಆಸ್ಪತ್ರೆಗಳಲ್ಲಿ ಗ್ರಾಮಾಂತರ ಹಾಗೂ ನಗರ ಜಿಲ್ಲಾ ವ್ಯಾಪ್ತಿಯ ಪಂಚಾಯಿತಿಗಳಲ್ಲಿನ ಸೋಂಕಿತರಿಗೆ ಚಿಕಿತ್ಸೆ ನೀಡಲು ನಿರಾಕರಿಸಲಾಗುತ್ತಿದೆ ಎಂಬ ಆರೋಪಕ್ಕೆ ಸ್ಪಷ್ಟನೆ ನೀಡಿದ ಆಯುಕ್ತರು, ಬಿಬಿಎಂಪಿ ವ್ಯಾಪ್ತಿಯ ಎಲ್ಲ ಆಸ್ಪತ್ರೆಗಳಲ್ಲಿ ಗ್ರಾಮಾಂತರ, ನಗರ ಜಿಲ್ಲಾ ವ್ಯಾಪ್ತಿಯ ಗ್ರಾಪಂಗಳಲ್ಲಿನ ಸೋಂಕಿತರಿಗೂ ಚಿಕಿತ್ಸೆ ನೀಡಲಾಗುವುದು. ಯಾರಿಗೂ ಚಿಕಿತ್ಸೆ ನಿರಾಕರಿಸಿಲ್ಲ. ಹೀಗಾಗಿ, ಯಾರೂ ಆತಂಕಗೊಳ್ಳುವ ಅವಶ್ಯಕತೆಯಿಲ್ಲ ಎಂದು ಭರವಸೆ ನೀಡಿದರು.