Advertisement

ರಾಷ್ಟ್ರೀಕೃತ ಬ್ಯಾಂಕ್‌ ಸಾಲಮನ್ನಾಕ್ಕೆ ಒತ್ತಾಯ

12:29 PM Jul 18, 2017 | |

ಚಿತ್ತಾಪುರ: ರಾಷ್ಟ್ರೀಕೃತ ಬ್ಯಾಂಕ್‌ಗಳಿಂದ ರೈತರು ಪಡೆದಿರುವ ಸಾಲಮನ್ನಾ ಮಾಡಬೇಕೆಂದು ಒತ್ತಾಯಿಸಿ ಪಟ್ಟಣದ ಲಾಡ್ಜಿಂಗ್‌ ಕ್ರಾಸ್‌ನಲ್ಲಿ ತಾಲೂಕು ಯುವ ಕಾಂಗ್ರೆಸ್‌ ಅಧ್ಯಕ್ಷ ಶೇಖ ಬಬು ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

Advertisement

ಪ್ರತಿಭಟನೆ ಉದ್ದೇಶಿಸಿ ಜಿಲ್ಲಾ ಯುವ ಕಾಂಗ್ರೆಸ್‌ ಅಧ್ಯಕ್ಷ ಈರಣ್ಣ ಪಾಟೀಲ ಝಳಕಿ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಭೀಮಣ್ಣ ಸಾಲಿ, ಜಿಪಂ
ಸದಸ್ಯ ಶಿವರುದ್ರ ಭೀಣಿ, ಗುರಣ್ಣ ಮಾಸ್ಟರ್‌, ಪುರಸಭೆ ಸದಸ್ಯ ಶಿವಾಜಿ ಕಾಶಿ ಮಾತನಾಡಿದರು. ಕಳೆದ ಮೂರು ವರ್ಷಗಳಿಂದ ರಾಜ್ಯದಲ್ಲಿ ತೀವ್ರ ಬರಗಾಲ ಕಾಡುತ್ತಿದೆ. ರಾಜ್ಯದ ರೈತರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಹೀಗಾಗಿ ಕೇಂದ್ರ ಸರ್ಕಾರ
ಕೂಡಲೇ ರಾಷ್ಟ್ರೀಕೃತ ಬ್ಯಾಂಕ್‌ಗಳ ಕೃಷಿ ಸಾಲಮನ್ನಾ ಮಾಡಬೇಕು ಎಂದು ಒತ್ತಾಯಿಸಿದರು.

ರಾಜ್ಯ ಸರ್ಕಾರ ರೈತರ ಸಂಕಷ್ಟ ಪರಿಸ್ಥಿತಿ ಅರಿತು ಸಹಕಾರಿ ಬ್ಯಾಂಕ್‌ಗಳ ಕೃಷಿ ಸಾಲ ಮನ್ನಾ ಮಾಡಿದೆ. ಇದರಿಂದ ಸುಮಾರು
22 ಲಕ್ಷ ರೈತರಿಗೆ ಅನುಕೂಲವಾಗಿದೆ. ಅದೇ ರೀತಿ ಕೇಂದ್ರ ಸರ್ಕಾರವೂ ರೈತರ ನೆರವಿಗೆ ಧಾವಿಸಬೇಕು ಎಂದು ಆಗ್ರಹಿಸಿದರು.
ರಾಜ್ಯದ 17 ಮಂದಿ ಬಿಜೆಪಿ ಸಂಸದರು ಒಂದು ಬಾರಿಯೂ ಸಂಸತ್ತಿನಲ್ಲಿ ರೈತರ ಬಗ್ಗೆ ಧ್ವನಿ ಎತ್ತಿಲ್ಲ. ಇನ್ನಾದರೂ ರಾಜ್ಯದ ಸಂಸದರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮೇಲೆ ಒತ್ತಡ ಹೇರಿ ರಾಷ್ಟ್ರೀಕೃತ ಬ್ಯಾಂಕ್‌ಗಳ ಸಾಲ ಮನ್ನಾ ಮಾಡಲು ಒತ್ತಡ 
ಹೇರಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಉಪಾಧ್ಯಕ್ಷ ಶರಣು ಡೋಣಗಾಂವ, ಕಾಂಗ್ರೆಸ್‌ ಕಿಸಾನ್‌ ಘಟಕದ ಅಧ್ಯಕ್ಷ ನಾಗರೆಡ್ಡಿ ಗೋಪಸೇನ್‌, ಅಲ್ಪಸಂಖ್ಯಾತ ಘಟಕ ಅಧ್ಯಕ್ಷ ಮುಕ್ತಾರ ಪಟೇಲ್‌, ಪುರಸಭೆ ಅಧ್ಯಕ್ಷೆ  ಅನ್ನಪೂರ್ಣ ಹೊತಿನಮಡಿ, ಉಪಾಧ್ಯಕ್ಷ ಮಹ್ಮದ್‌ ರಸೂಲ್‌ ಮುಸ್ತಫಾ, ಎಪಿಎಂಸಿ ಅಧ್ಯಕ್ಷ ಬಸವರಾಜ ಸಜ್ಜನ್‌, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸೂರ್ಯಕಾಂತ ಪೂಜಾರಿ, ಪುರಸಭೆ ಸದಸ್ಯರಾದ ಶಿವಕಾಂತ ಬೆಣ್ಣೂರಕರ್‌, ಜಫರುಲ್‌ ಹಸನ್‌ ಹಾಗೂ ತಾಲೂಕಿನ ವಿವಿಧ ಹಳ್ಳಿಗಳಿಂದ ಆಗಮಿಸಿದ್ದ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next