Advertisement
ನಿತ್ಯವೂ ದರ ಹೆಚ್ಚಳವಾಗುತ್ತಿರುವುದರಿಂದ ಸರಕು ಸಾಗಾಣಿಕೆ ವಲಯಕ್ಕೆ ದೊಡ್ಡ ಹೊರೆಯಾಗಿದ್ದು, ಇದರಿಂದ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ. ಕೋವಿಡ್-19 ಸಂದರ್ಭದಲ್ಲಿ ಆರ್ಥಿಕ ಸಂಕಷ್ಟದಿಂದ ಜನರು ನರಳುತ್ತಿರುವಾಗ ಅಗತ್ಯ ವಸ್ತುಗಳ ಬೆಲೆ ಹೆಚ್ಚಳವಾಗುತ್ತಿರುವುದು ಜನ ಸಾಮಾನ್ಯರು ಕಷ್ಟ ಎದುರಿಸುವಂತಾಗುತ್ತಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆ ಇಳಿಕೆಯಾಗಿದ್ದರೂ ಕೇಂದ್ರ ಹಾಗೂ ರಾಜ್ಯ ಸರಕಾರ ವಿವಿಧ ರೀತಿಯ ತೆರಿಗೆಗಳನ್ನು ಹೆಚ್ಚಿಸಿ ಮತ್ತಷ್ಟು ಹೊರೆ ಮಾಡುತ್ತಿರುವುದರಿಂದ ಸಂಕಷ್ಟದ ಸ್ಥಿತಿಯಲ್ಲಿ ಜನರಿಗೆ ಪರಿಹಾರ ಕಾಣುತ್ತಿಲ್ಲ. ಕೇಂದ್ರ ಹಾಗೂ ರಾಜ್ಯ ಸರಕಾರ ವಿಧಿಸುತ್ತಿರುವ ತೆರಿಗೆಗಳನ್ನು ಇಳಿಸಿ ಬೆಲೆ ಏರಿಕೆ ಹೊರೆ ಕಡಿಮೆ ಮಾಡಬೇಕು ಎಂದು ಪತ್ರದ ಮೂಲಕ ಒತ್ತಾಯಿಸಲಾಗಿದೆ ಎಂದು ಗೌರವ ಕಾರ್ಯದರ್ಶಿ ಅಶೋಕ ಗಡಾದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. Advertisement
ತೈಲ ಬೆಲೆ ಇಳಿಕೆಗೆ ಒತ್ತಾಯ
10:54 AM Jun 28, 2020 | Suhan S |
Advertisement
Udayavani is now on Telegram. Click here to join our channel and stay updated with the latest news.