Advertisement

ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬಗಳಿಗೆ ಪರಿಹಾರ ನೀಡಲು ಒತ್ತಾಯ

07:30 AM May 16, 2020 | Suhan S |

ಹಗರಿಬೊಮ್ಮನಹಳ್ಳಿ: ಲಾಕ್‌ಡೌನ್‌ ಅವಧಿಯಲ್ಲಿ ಹಾಗೂ ಅದಕ್ಕಿಂತ ಮುಂಚಿತವಾಗಿ ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬಗಳಿಗೆ ಪರಿಹಾರ ನೀಡಬೇಕು ಎಂದು ಪ್ರಾಂತ ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಕೊಟಿಗಿ ಮಲ್ಲಿಕಾರ್ಜುನ ಆಗ್ರಹಿಸಿದರು.

Advertisement

ಪಟ್ಟಣದ ತಹಶೀಲ್ದಾರ್‌ ಕಚೇರಿ ಮುಂಭಾಗ ಪ್ರಾಂತ ರೈತ ಸಂಘದ ತಾಲೂಕು ಪದಾಧಿಕಾರಿಗಳು ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಪರಿಹಾರ ನೀಡುವಂತೆ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಡೆಸಿದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬದ ಶಿಕ್ಷಣವಂತ ಯುವಕರಿಗೆ ಸರಕಾರಿ ಉದ್ಯೋಗ ನೀಡಬೇಕು. ಲಾಕ್‌ಡೌನ್‌ ವೇಳೆ ಆತ್ಮಹತ್ಯೆಗೆ ಶರಣಾದ ರೈತ ಕುಟುಂಬಗಳ ಸಾಲಮನ್ನಾ ಮಾಡಬೇಕು. ಕೊಟ್ಟೂರು ತಾಲೂಕಿನ ಕಾಳಾಪುರ ಗ್ರಾಮದ ಮೃತ ರೈತ ಬಸವರಾಜ ಕುಟುಂಬದವರಿಗೆ ತಕ್ಷಣವೇ ಪರಿಹಾರ ನೀಡಬೇಕು. ಮೃತ ರೈತರ ಮಡದಿಗೆ ಮಾಸಿಕ 5ಸಾವಿರ ರೂ. ನೆರವು ನೀಡಬೇಕು ಎಂದು ಆಗ್ರಹಿಸಿದರು. ಉಪತಹಶೀಲ್ದಾರ್‌ ಶಿವಕುಮಾರ ಗೌಡಗೆ ಮನವಿ ಸಲ್ಲಿಸಿದರು.

ಸಂಘದ ತಾಲೂಕು ಅಧ್ಯಕ್ಷ ಕೆ.ಗಾಳೆಪ್ಪ, ಉಪಾಧ್ಯಕ್ಷ ಹನುಮನಗೌಡ, ಕಾರ್ಯದರ್ಶಿ ಎಚ್‌.ಮಂಜುನಾಥ, ಮುಖಂಡರಾದ ಸಿ.ಹನುಮಂತಪ್ಪ, ಎಂ.ಆನಂದ, ಕೆ.ತಿಂದಪ್ಪ ಇತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next