Advertisement

ಕಾರ್ಮಿಕ ವಿಭಾಗದ ಅಧ್ಯಕ್ಷರಿಗೆ ಎಂಎಲ್‌ಸಿ ಸ್ಥಾನಕ್ಕೆ ಒತ್ತಾಯ

12:21 PM Mar 26, 2019 | Team Udayavani |

ಬೆಂಗಳೂರು: ಕಾರ್ಮಿಕ ವಿಭಾಗದ ಅಧ್ಯಕ್ಷ ಡಾ.ಎಸ್‌.ಎಸ್‌.ಪ್ರಕಾಶ ಅವರಿಗೆ ವಿಧಾನ ಪರಿಷತ್‌ ಸ್ಥಾನ ನೀಡುವಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಯ ಕಾರ್ಮಿಕ ವಿಭಾಗ ಒತ್ತಾಯಿಸಿದೆ.

Advertisement

ಪಕ್ಷದಿಂದ ಕಾರ್ಮಿಕ ವಿಭಾಗದ ಮುಖಂಡರಿಗೆ ಇದುವರೆಗೂ ಲೋಕಸಭೆ, ರಾಜ್ಯಸಭೆ, ವಿಧಾನ ಪರಿಷತ್‌ ಹಾಗೂ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಿಲ್ಲ. ಈ ಹಿನ್ನೆಲೆಯಲ್ಲಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾರ್ಮಿಕ ಮುಖಂಡರಿಗೆ ಟಿಕೆಟ್‌ ನೀಡುವಂತೆ ಪಕ್ಷದ ಮುಖಂಡರಲ್ಲಿ ಮನವಿ ಮಾಡಿದ್ದರೂ ಸ್ಪಂದಿಸಿಲ್ಲ.

ಕಾರಣ, ವಿಧಾನ ಪರಿಷತ್‌ ಸದಸ್ಯ ಸ್ಥಾನವನ್ನು ಡಾ.ಎಸ್‌.ಎಸ್‌.ಪ್ರಕಾಶ ಅವರಿಗೆ ನೀಡಬೇಕು ಎಂದು ಕಾರ್ಮಿಕ ವಿಭಾಗ ಅಧ್ಯಕ್ಷ ಡಾ.ಮೋಹನ್‌ ರಾವ್‌ ನಲವಾಡೆ ಸೋಮವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next