Advertisement

ಸಹಾಯಕ ನಿರ್ದೇಶಕ ಹುದ್ದೆಗೆ ಬಡ್ತಿ ನೀಡಲು ಪಿಡಿಒಗಳ ಒತ್ತಾಯ

02:40 PM May 27, 2022 | Team Udayavani |

ರಾಯಚೂರು: ಖಾಲಿ ಇರುವ ಸಹಾಯಕ ನಿರ್ದೇಶಕರ ಹುದ್ದೆಗೆ ಪಿಡಿಒಗಳಿಗೆ ಬಡ್ತಿ ನೀಡುವಂತೆ ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರು ಗುರುವಾರ ಪ್ರತಿಭಟನೆ ನಡೆಸಿದರು.

Advertisement

ಈ ಕುರಿತು ಡಿಸಿ ಮೂಲಕ ಸಿಎಂಗೆ ಮನವಿ ಸಲ್ಲಿಸಿ, ಕಳೆದ ಎಂಟು ವರ್ಷಗಳಿಂದ ನನೆಗುದಿಗೆ ಬಿದ್ದ ಪಿಡಿಒ ಹುದ್ದೆಯನ್ನು ಗ್ರೂಪ್‌ ಬಿಗೆ ಮೇಲ್ದರ್ಜೆಗೇರಿಸಬೇಕು. ಸಹಾಯಕ ನಿರ್ದೇಶಕರ ಹುದ್ದೆಗೆ ಬಡ್ತಿ ನೀಡಬೇಕು. 2006-07ರಿಂದ 2011-12ರ ವರೆಗೆ ನರೇಗಾದಡಿ ಅನುಷ್ಠಾನಗೊಂಡ ಕಾಮಗಾರಿಗಳನ್ನು ತನಿಖೆ ಮಾಡಲು ಲೋಕಾಯುಕ್ತಕ್ಕೆ ವಹಿಸಿರುವ ಪ್ರಕರಣ ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ಅಧಿಕಾರಿ ಹಾಗೂ ನೌಕರರನ್ನು ಕೌನ್ಸೆಲಿಂಗ್‌ ಮೂಲಕ ವರ್ಗಾವಣೆ ಮಾಡುವ ನಿಯಮ ಜಾರಿಗೊಳಿಸಬೇಕು. ಇಲಾಖೆಯ ಎಲ್ಲ ಅಧಿಕಾರಿ ಮತ್ತು ಸಿಬ್ಬಂದಿಯ ಸೇವಾ ವಿಷಯಗಳನ್ನು ಸಕಾಲ ವ್ಯಾಪ್ತಿಗೆ ತರಬೇಕು. ಕೊರೊನಾ ಸೋಂಕಿನಿಂದ ಮೃತರಾದ ನೌಕರರ ಕುಟುಂಬಗಳಿಗೆ ಪರಿಹಾರ ಮತ್ತು ಅನುಕಂಪದಡಿ ಉದ್ಯೋಗ ನೀಡಬೇಕು. 16ಎ ರದ್ದು ಮಾಡಿರುವುದರಿಂದ ಅಂತರ್‌ ಜಿಲ್ಲಾ ವರ್ಗಾವಣೆಗೆ ಅವಕಾಶವಿಲ್ಲ. ಈ ನಿಟ್ಟಿನಲ್ಲಿ ಒಂದು ಬಾರಿ ಅಂತರ್‌ ಜಿಲ್ಲಾ ವರ್ಗಾವಣೆಗೆ ಅವಕಾಶ ನೀಡಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು.

ಸಂಘದ ಜಿಲ್ಲಾಧ್ಯಕ್ಷ ದೊಡ್ಡಲಿಂಗಪ್ಪ, ರಾಜ್ಯ ಪರಿಷತ್‌ ಸದಸ್ಯ ತಿಮ್ಮಪ್ಪ ನಾಯಕ, ಪ್ರಧಾನ ಕಾರ್ಯದರ್ಶಿ ನರಸಪ್ಪ, ಸಂಘಟನಾ ಕಾರ್ಯದರ್ಶಿ ಸರೋಜಾ, ಸದಸ್ಯರಾದ ಮಹಾಂತಮ್ಮ, ಬಸವರಾಜ ಆಲ್ಕೋಡ್‌, ಸುಧೀರ್‌, ಶಾರದಾ, ಮುದುಕಪ್ಪ, ಪಂಪನಗೌಡ, ಅಕ್ತರ್‌ ಪಾಷಾ ಸೇರಿ ಅನೇಕರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next