Advertisement

ಕಬ್ಬು ಪೂರೈಸಿದ ರೈತರಿಗೆ ಹಣ ಪಾವತಿಸಲು ಒತ್ತಾಯ

05:44 PM May 10, 2022 | Team Udayavani |

ಭಾಲ್ಕಿ: ಜಿಲ್ಲೆಯ ವಿವಿಧ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಸಾಗಿಸಿದ ರೈತರ ಖಾತೆಗಳಿಗೆ ಬಾಕಿ ಹಣ ಪಾವತಿಸುವಂತೆ ಜಿಲ್ಲಾ ರೈತ ಸಂಘ ಒತ್ತಾಯ ಮಾಡಿದೆ.

Advertisement

ಈ ಕುರಿತು ಈಚೆಗೆ ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸಭೆ ನಿಮಿತ್ತ ಪಟ್ಟಣಕ್ಕೆ ಆಗಮಿಸಿದ್ದ ಸಕ್ಕರೆ ಖಾತೆ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ್‌ ಅವರನ್ನು ಜಿಲ್ಲಾ ರೈತ ಸಂಘದ ಅಧ್ಯಕ್ಷ ಸಿದ್ರಾಮಪ್ಪ ಆಣದೂರೆ ನೇತೃತ್ವದಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿದರು.

2021-22ನೇ ಸಾಲಿನಲ್ಲಿ ಜಿಲ್ಲೆಯ ಬೀದರ ಸಹಕಾರ ಸಕ್ಕರೆ ಕಾರ್ಖಾನೆ, ಬಿಕೆಎಸ್‌ಕೆ ಮತ್ತು ಭಾಲ್ಕೇಶ್ವರ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಸಾಗಿಸಿದ ರೈತರ ಖಾತೆಗಳಿಗೆ ವಾರದೊಳಗೆ ಬಾಕಿ ಹಣ ಪಾವತಿಸಬೇಕು ಎಂದು ಮನವಿ ಪತ್ರದಲ್ಲಿ ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ರೈತ ಸಂಘದ ತಾಲೂಕು ಅಧ್ಯಕ್ಷ ಬಾಬುರಾವ ಜೋಳದಾಪಕೆ, ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಿರಾದಾರ್‌, ಸಂಘಟನಾ ಕಾರ್ಯದರ್ಶಿ ಸತೀಶ ಹೊನ್ನಾಳೆ ಸೇರಿದಂತೆ ಹಲವರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next