Advertisement

Yadagiri; ಅತಿವೃಷ್ಠಿಯಿಂದಾದ ಹಾನಿ ಬಗ್ಗೆ ಪರಿಶೀಲಿಸಿ ವರದಿ ಸಲ್ಲಿಸಿ: ಸಚಿವ ದರ್ಶನಾಪುರ

04:48 PM Sep 03, 2024 | Team Udayavani |

ಯಾದಗಿರಿ: ಅತಿವೃಷ್ಠಿಯಿಂದಾದ ಬೆಳೆ ಹಾನಿ ಮತ್ತು ಮನೆ ಹಾನಿ ಕುರಿತಂತೆ ಪರಿಶೀಲನೆ ನಡೆಸಿ ಶೀಘ್ರ ವರದಿ ಸಲ್ಲಿಸುವುದರ ಜೊತೆಗೆ ಈ ಹಿಂದೆ ಮನೆ ಹಾನಿಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಪರಿಹಾರವನ್ನು ಆದ್ಯತೆ ಮೇಲೆ ವಿತರಿಸುವಂತೆ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಖಾತೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶರಣಬಸಪ್ಪ ದರ್ಶನಾಪುರ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

Advertisement

ಜಿಲ್ಲೆಯ ವಿವಿಧ ತಾಲೂಕಗಳಲ್ಲಿ ಇತ್ತೀಚಿಗೆ ಸುರಿದ ಮಳೆಯಿಂದಾಗಿ ಬೆಳೆ ನಷ್ಟವಾಗಿರುವ ಹಿನ್ನೆಲೆಯಲ್ಲಿ ಉಸ್ತುವಾರಿ ಸಚಿವರಾದ ಶರಣಬಸಪ್ಪ ದರ್ಶನಾಪುರ ಅವರು ಯಾದಗಿರಿ ತಾಲೂಕಿನ ಪಗಲಾಪುರ ಸೇತುವೆ, ಭೀಮಾ ಹಳೆ ಸೇತುವೆ, ನಾಯ್ಕಲ್ ಗ್ರಾಮದ ಹೊರವಲಯದಲ್ಲಿರುವ ಹತ್ತಿಬೆಳೆ, ಹೆಸರು ಹಾಗೂ ಇನ್ನಿತರ ಬೆಳೆಗಳ ಹಾನಿ ಬಗ್ಗೆ ಖುದ್ದಾಗಿ ಪರಿಶೀಲನೆ ನಡೆಸಿ ರೈತರಿಂದ ಮಾಹಿತಿ ಪಡೆದರು.

ಮಳೆ ಹಾನಿ ಬಗ್ಗೆ ಅಧಿಕಾರಿಗಳು ಜಂಟಿ ಸಮೀಕ್ಷೆ ನಡೆಸಬೇಕು. ಅದರಂತೆ ಮನೆ ಹಾನಿ, ರಸ್ತೆ ಮೂಲ ಸೌಕರ್ಯಗಳ ಹಾನಿ ಕುರಿತು ಶೀಘ್ರ ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ತಿಳಿಸಿದರು.

ಜಿಲ್ಲೆಯಲ್ಲಿ ಆಗಿರುವ ಬಿತ್ತನೆ, ಬೆಳೆ ಹಾನಿ, ಭೀಮಾ, ಕೃಷ್ಣ ನದಿ ವ್ಯಾಪ್ತಿಯಲ್ಲಿ ಬೆಳೆ ಪರಿಸ್ಥಿತಿ, ರಸಗೊಬ್ಬರದ ಅವಶ್ಯಕತೆ, ಬೆಳೆವಿಮೆ ಪರಿಹಾರ ವಿತರಣೆ, ತೋಟಗಾರಿಕಾ ಇಲಾಖೆ ವ್ಯಾಪ್ತಿಯಲ್ಲಿ ಆದ ಬೆಳೆ ಹಾನಿ, ಪ್ರೂಟ್ಸ್ ತಂತ್ರಾಂಶದಲ್ಲಿ ರೈತರ ನೋಂದಣಿ ಕುರಿತಂತೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

Advertisement

ಈ ಸಂದರ್ಭದಲ್ಲಿ ಶಾಸಕ ಚೆನ್ನಾರೆಡ್ಡಿ ಪಾಟೀಲ ತುನ್ನೂರ, ಜಿಲ್ಲಾಧಿಕಾರಿ ಡಾ.ಸುಶೀಲ ಬಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ ಸಂಗೀತ, ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ, ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ವಿಜಯಕುಮಾರ ಮಡ್ಡೆ, ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್,  ಕೃಷಿ ಇಲಾಖೆ ಜಂಟಿ ನಿರ್ದೇಶಕ ರತೇಂದ್ರನಾಥ ಸೂಗೂರು ಸೇರಿದಂತೆ ಎಲ್ಲಾ ತಾಲೂಕಿನ ತಹಶೀಲ್ದಾರರ, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next