Advertisement

ಕಾಮಗಾರಿ ವೀಕ್ಷಿಸಿದ ಶಾಸಕ ಅಜಯಸಿಂಗ್‌

05:23 PM Sep 05, 2020 | Suhan S |

ಜೇವರ್ಗಿ: ತಾಲ್ಲೂಕಿನ ಕಟ್ಟಿಸಂಗಾವಿ ಗ್ರಾಮದ ಹತ್ತಿರ ಭೀಮಾ ನದಿಗೆ ಅಡ್ಡಲಾಗಿ ನಿರ್ಮಿಸುತ್ತಿರುವ ವೆಂಟೆಡ್‌ ಡ್ಯಾಂ ನಿರ್ಮಾಣ ಕಾಮಗಾರಿಯನ್ನು ಶಾಸಕ ಡಾ| ಅಜಯಸಿಂಗ್‌ ಶುಕ್ರವಾರ ವೀಕ್ಷಣೆ ಮಾಡಿದರು.

Advertisement

ರಾಜ್ಯ ಸರ್ಕಾರದ ಸಣ್ಣ ನೀರಾವರಿ ಇಲಾಖೆ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಹಾಗೂ ನಗರೋತ್ಥಾನ ಯೋಜನೆಯಡಿ ಒಟ್ಟು 14 ಕೋಟಿ ರೂ. ಅನುದಾನದಲ್ಲಿ ಈ ಡ್ಯಾಂ ಕಾಮಗಾರಿ ನಡೆಯುತ್ತಿದ್ದು, ಮುಂಬರುವ ಮೂರು ತಿಂಗಳ ಅವ ಧಿಯಲ್ಲಿ ಬ್ರಿಜ್‌ ಕಂ ಬ್ಯಾರೇಜ್‌ ಕಾಮಗಾರಿ ಪೂರ್ಣಗೊಳಿಸಲಾಗುವುದು. ಬ್ರಿಜ್‌ ಕಂ ಬ್ಯಾರೇಜ್‌ ನಿರ್ಮಾಣದಿಂದ ಮುಂಬರುವ ಬೇಸಿಗೆಯಲ್ಲಿ ಪಟ್ಟಣದ ಜನತೆಗೆ ಅಗತ್ಯ ಪ್ರಮಾಣದಲ್ಲಿ ಕುಡಿಯುವ ನೀರು ಪೂರೈಕೆ ಮಾಡಲು ಅನುಕೂಲವಾಗಲಿದೆ ಎಂದರು.

ಕೆರೆ ನಿರ್ಮಾಣಕ್ಕೆ 5 ಕೋಟಿ ಅನುದಾನ ರೂ.: ಪಟ್ಟಣದ ಶಹಾಪುರ ರಸ್ತೆಯಲ್ಲಿರುವ ಸಂಪತ್‌ ಲಕ್ಷ್ಮೀ ದೇವಸ್ಥಾನದ ಹತ್ತಿರ ಕೆರೆ ನಿರ್ಮಾಣಕ್ಕೆ ಸಣ್ಣ ನೀರಾವರಿ ಇಲಾಖೆಯಿಂದ 5 ಕೋಟಿ ರೂ. ಅನುದಾನ ಬಿಡುಗಡೆಗೊಳಿಸಲಾಗಿದೆ. ಈಗಾಗಲೇ 3.25 ಕೋಟಿ ರೂ. ವೆಚ್ಚದ ಕಾಮಗಾರಿ ಪೂರ್ಣಗೊಳಿಸಲಾಗಿದೆ. ಉಳಿದ 1.75 ಕೋಟಿ ರೂ. ವೆಚ್ಚದ ಕಾಮಗಾರಿ ಕೈಗೊಂಡ ನಂತರ ಅಗತ್ಯವಿದ್ದರೆ ಇನ್ನೂ ಹೆಚ್ಚಿನ ಅನುದಾನ ಸರ್ಕಾರದಿಂದ ತರಲಾಗುವುದು. ಬ್ರಿಜ್‌ ಕಂ ಬ್ಯಾರೇಜ್‌ ಹಾಗೂ ಕೆರೆ ನಿರ್ಮಾಣ ಕಾಮಗಾರಿಗಳನ್ನು ನಿಗದಿತ ಅವಧಿ ಯಲ್ಲಿ ಪೂರ್ಣಗೊಳಿಸುವಂತೆ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳಿಗೆ ತಾಕೀತು ಮಾಡಲಾಗಿದೆ ಎಂದು ಶಾಸಕ ಡಾ| ಅಜಯಸಿಂಗ್‌ ತಿಳಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಕಾಶಿರಾಯಗೌಡ ಯಲಗೋಡ, ತಿಪ್ಪಣ್ಣ ನಾಡಗೇರ, ಯುತ್‌ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ವಿಜಯಕುಮಾರ ಪಾಟೀಲ ಕಲ್ಲಹಂಗರಗಾ, ಮಹಿಮೂದ್‌ ನೂರಿ, ನೀಲಕಂಠ ಅವಂಟಿ, ರವೀಂದ್ರ ಕೋಳಕೂರ, ಸಂಗಮೇಶ ಕಟ್ಟಿಸಂಗಾವಿ, ದೇವಿಂದ್ರಕಟ್ಟಿಸಂಗಾವಿ, ರಹಿಮೂದ್ದೀನ್‌ ಕಟ್ಟಿಸಂಗಾವಿ, ಪರಶುರಾಮ ಪಾಟೀಲ, ದಿನೇಶ ಠಾಕೂರ, ಸಣ್ಣ ನೀರಾವರಿ ಇಲಾಖೆಯ ಸಹಾಯಕ ಎಂಜಿನಿಯರ್‌ ಮಧುಸೂಧನ ತಿಮ್ಮಾಪುರಿ ಇದ್ದರು

Advertisement

Udayavani is now on Telegram. Click here to join our channel and stay updated with the latest news.

Next