ದೇವನಹಳ್ಳಿ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿದೇಶದಿಂದ ಪ್ರಯಾಣಿಕ ಚಪ್ಪಲಿಯಲ್ಲಿ ಚಿನ್ನವನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ.
ಪ್ರಯಾಣಿಕನ ಪೂರ್ವ ಅಪರಾಧಿಕ ಮಾಹಿತಿಯ ಆಧಾರದ ಮೇಲೆ ಬೆಂಗಳೂರಿನ ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ಮಾಡಿದಾಗ ಆತನ ಚಪ್ಪಲಿಯಲ್ಲಿ ಚಿನ್ನ ಕಳ್ಳ ಸಾಗಣೆ ಮಾಡುತ್ತಿರುವುದು ಕಂಡು ಬಂದಿದೆ.
ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಬಂದಿದ್ದ ಆರೋಪಿಯೂ ಒಟ್ಟು 1 ಕೆಜಿ 205 ಗ್ರಾಂ ನಷ್ಟು ಚಿನ್ನವನ್ನು ಚಪ್ಪಲಿಯಲ್ಲಿ ಬಚ್ಚಿಟ್ಟು, ಕಳ್ಳ ಸಾಗಣೆಗೆ ಯತ್ನಿಸಿದ್ದಾನೆ.ಸುಲಭವಾಗಿ ಅಧಿಕಾರಿಗಳ ಕಣ್ತಪ್ಪಿಸುವ ಉದ್ದೇಶದಿಂದ ಚಿನ್ನವನ್ನು ಸಣ್ಣ ಸಣ್ಣ ತುಂಡುಗಳನ್ನಾಗಿಸಿಕೊಂಡು ಚಪ್ಪಲಿ ಯಲ್ಲಿರಿಸಿದ್ದ. ಆರೋಪಿತನಿಂದ ವಶಕ್ಕೆ ಪಡೆದ ಚಿನ್ನ ಒಟ್ಟು70 ಲಕ್ಷ ರೂ.ಮೌಲ್ಯದ್ದು ಎಂದು ಅಂದಾಜಿಸಲಾಗಿದ್ದು, ಈತನನ್ನು ಬಂಧಿಸಿ ಪ್ರಕರಣ ದಾಖಲಿಸಲಾಗಿದೆ.