Advertisement

ಜಿಲ್ಲಾಧಿಕಾರಿಗಳಿಂದ ಅಭಿವೃದ್ಧಿ ಕಾಮಗಾರಿ ಪರಿಶೀಲನೆ

06:56 PM Oct 30, 2020 | Suhan S |

ಯಾದಗಿರಿ: ನಗರದ ರಂಗಮಂದಿರ, ಕನ್ನಡ ಭವನ, ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಜಿಲ್ಲಾ ಕ್ರೀಡಾಂಗಣಕ್ಕೆ ಜಿಲ್ಲಾಧಿಕಾರಿ ಡಾ| ರಾಗಪ್ರಿಯಾ ಗುರುವಾರ ಭೇಟಿ ನೀಡಿ ಅಲ್ಲಿನ ಕಾಮಗಾರಿ ಪರಿಶೀಲಿಸಿದರು.

Advertisement

ರಂಗಮಂದಿರಕ್ಕೆ ಭೇಟಿ ನೀಡಿದ ಅವರು, ರಂಗ ಮಂದಿರ ಹಾಗೂ ಕನ್ನಡ ಭವನ ಕಟ್ಟಡ ನಿರ್ಮಾಣಕಾಮಗಾರಿಗಳಿಗೆ ಗುಣಮಟ್ಟದ ಸಾಮಗ್ರಿಗಳನ್ನುಬಳಕೆ ಮಾಡಬೇಕು. ನೀಲನಕ್ಷೆಯಂತೆಯೇ ಕಟ್ಟಡ ಕಾಮಗಾರಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು. ಎರಡೂ ಭವನಗಳ ಸುತ್ತಮುತ್ತ ಸ್ಪತ್ಛತಾ ಕಾರ್ಯಕೈಗೊಳ್ಳುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಿಗೆ ಸೂಚಿಸಿದರು.

ಬಳಿಕ ಜಿಲ್ಲಾ ಕ್ರೀಡಾಂಗಣಕ್ಕೆ ಭೇಟಿ ನೀಡಿ, ಯುವಜನ ಸೇವಾ ಹಾಗೂ ಕ್ರೀಡಾ ಇಲಾಖೆಯ ಕಚೇರಿ ಕಟ್ಟಡದಲ್ಲಿ ಗೋಡೆಗಳು ಸಣ್ಣ ಸಣ್ಣ ಬಿರುಕು ಬಿಟ್ಟಿದ್ದು, ಕೂಡಲೇ ಅದನ್ನು ದುರಸ್ತಿಗೊಳಿಸುವಂತೆ ಸೂಚಿಸಿದರು. ಜಿಲ್ಲಾ ಕ್ರೀಡಾಂಗಣಕ್ಕೆ ನಿತ್ಯಕ್ರೀಡಾಪಟುಗಳು ಹಾಗೂ ವಾಯು ವಿಹಾರಕ್ಕೆಂದು ಬರುವ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆ ಆಗಬಾರದು ಎಂದರು.

ಕ್ರೀಡಾಂಗಣದಲ್ಲಿ ಕೈಗೊಳ್ಳಲಾಗುವ ಕಾಮಗಾರಿಗಳಲ್ಲಿ ಉತ್ತಮ ಗುಣಮಟ್ಟದ ಕಟ್ಟಡ ಸಾಮಗ್ರಿಗಳೇ ಬಳಕೆಯಾಗಬೇಕು. ವಾಕಿಂಗ್‌ ಪಾಥ ಸೇರಿದಂತೆ ಮೈದಾನದಲ್ಲಿ ಮಳೆ ನೀರು ನಿಲ್ಲದಂತೆ ಕಾಮಗಾರಿ ಕೈಗೊಂಡು ಸಾಧ್ಯವಾದಷ್ಟು  ಬೇಗ ಕಾಮಗಾರಿ ಪೂರ್ಣಗೊಳಿಸಬೇಕು. ಪ್ರತಿ ತಿಂಗಳು ಟಾಸ್ಕ್ಫೋರ್ಸ್‌ ಸಭೆ ನಡೆಸಿ ಬಾಕಿ ಉಳಿದ ಕಾಮಗಾರಿಗಳ ಮಾಹಿತಿ ನೀಡುವಂತೆ ನಿರ್ದೇಶನ ನೀಡಿದರು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹೊಸದಾಗಿ ನಿರ್ಮಾಣವಾದ ಕೋಣೆಗಳನ್ನು ವೀಕ್ಷಿಸಿ, ಕಾಲೇಜಿನ ಆವರಣ ಸ್ಪತ್ಛವಾಗಿಟ್ಟುಕೊಳ್ಳಬೇಕು. ಸ್ಪತ್ಛ ಪರಿಸರ ವಿದ್ಯಾರ್ಥಿಗಳಲ್ಲಿ ಏಕಾಗ್ರತೆ ಮೂಡಿಸುವ ಕಾರಣ ಅವರ ಕಲಿಕೆ ಉತ್ತಮಗೊಳ್ಳುತ್ತದೆ ಎಂದರು.

Advertisement

ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಅಭಿಯಂತರ ದೇವಿದಾಸ್‌ ಚವ್ಹಾಣ, ಕೆಆರ್‌ಆಯ್‌ಡಿಎಲ್‌ ಅಧಿಕಾರಿ ಧನಜಯ್‌, ಕಾರ್ಯನಿರ್ವಾಹಕ ಅಭಿಯಂತರ ಸಲೀಂ ಶೇಖ, ಶಿವರಾಜ, ಹಾನಪ್ಪ ಸೇರಿದಂತೆ ಸಂಬಂಧಿಸಿದ ಅಧಿಕಾರಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next