Advertisement
ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ತ್ತೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
Related Articles
Advertisement
ವಿಧಾನ ಪರಿಷತ್ ಶಾಸಕ ಎಸ್.ಎಲ್. ಬೋಜೇಗೌಡ ಮಾತನಾಡಿ, ಕಾಮಗಾರಿ ನಿರ್ವಹಿಸಲು ಅನುದಾನದ ಕೊರತೆ ಇಲ್ಲ. ಮುಖ್ಯಮಂತ್ರಿಗಳು ಅಗತ್ಯವಿದ್ದಷ್ಟು ಅನುದಾನವನ್ನು ಬಿಡುಗಡೆ ಮಾಡಿದ್ದಾರೆ. ಈ ಕಾಮಗಾರಿ ಕುರಿತು ಹಲವು ಸಭೆಗಳನ್ನು ನಡೆಸಲಾಗಿದೆ. ಆದರೂ, ಅಧಿಕಾರಿಗಳ ನಿರ್ಲಕ್ಷ ್ಯದಿಂದಾಗಿ ಕಾಮಗಾರಿ ಈವರೆಗೂ ಪೂರ್ಣಗೊಂಡಿಲ್ಲ ಎಂದರು.
ಸಚಿವ ಕೆ.ಜೆ.ಜಾರ್ಜ್ ಮಾತನಾಡಿ, ಕೆರೆಗೆ ನೀರು ಹರಿಯುವುದು ಮುಖ್ಯ. ಮೊದಲು ಅದರತ್ತ ಗಮನ ಹರಿಸೋಣ. ಕಾಮಗಾರಿ ಪೂರ್ಣಗೊಂಡಿದೆಯೋ ಇಲ್ಲವೋ ಎಂಬುದನ್ನು ತಂತ್ರಜ್ಞರೇ ತೀರ್ಮಾನಿಸಬೇಕಿದೆ. ಸಣ್ಣ ನೀರಾವರಿ ಸಚಿವರೊಂದಿಗೆ ಈ ಕುರಿತು ಚರ್ಚಿಸುತ್ತೇನೆ. ಸಮರ್ಥ ತಂತ್ರಜ್ಞ ರೊಂದಿಗೆ ಆಗಮಿಸಿ ಸ್ಥಳ ಪರಿಶೀಲಿಸುವಂತೆ ಕೋರುತ್ತೇನೆ. ಆ ನಂತರ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಕುರಿತು ಅವರೇ ತೀರ್ಮಾನಿಸಲಿ ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಬೋಜೇಗೌಡ ಮಾತನಾಡಿ, ಈ ಹಿಂದೆ ಎಚ್.ಡಿ.ಕುಮಾರಸ್ವಾಮಿ ಅವರು ಈ ಹಿಂದೆ ಸಿಎಂ ಆಗಿದ್ದಾಗ ಯೋಜನೆಗೆ ಮಂಜೂರಾತಿ ನೀಡಿ 3.50 ಕೋಟಿ ರೂ. ಬಿಡುಗಡೆ ಮಾಡಿದ್ದರು ಎಂದು ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಶಾಸಕ ಸಿ.ಟಿ.ರವಿ, ಸಭೆಗೆ ತಪ್ಪು ಮಾಹಿತಿ ಹೋಗಬಾರದು. ಕಾಮಗಾರಿಗೆ ಅನುದಾನ ಬಿಡುಗಡೆ ಆಗಿದ್ದು ಯಾವಾಗ ಎಂಬ ಮಾಹಿತಿಯನ್ನು ಇಲಾಖೆಯವರೇ ನೀಡಲಿ. ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ಯೋಜನೆಗೆ ಅನುದಾನ ಬಿಡುಗಡೆ ಆಗಿದೆ ಎಂದು ತಿಳಿಸಿದರು.
ಸಚಿವ ಕೆ.ಜೆ.ಜಾರ್ಜ್ ಮಾತನಾಡಿ, ಯಾವ ಮುಖ್ಯಮಂತ್ರಿ ಅನುದಾನ ಬಿಡುಗಡೆ ಮಾಡಿದ್ದರೂ ಅದು ಸರ್ಕಾರದ ಹಣವೇ. ಈಗ ಆ ವಿಚಾರದ ಕುರಿತು ಚರ್ಚೆ ಅವಶ್ಯಕತೆ ಇಲ್ಲ. ಕಾಮಗಾರಿ ಪೂರ್ಣಗೊಂಡು ಕೆರೆಗಳಿಗೆ ನೀರು ಹರಿದರೆ ಸಾಕು ಎಂದು ಹೇಳಿ ಚರ್ಚೆಗೆ ಮುಕ್ತಾಯ ಹಾಡಿದರು.
ನೋಟಿಫಿಕೇಶನ್ ರದ್ಧತಿಗೆ ಪ್ರಸ್ತಾವನೆ: ಸಭೆಯಲ್ಲಿ ಕುದುರೆಮುಖ ವಿಷಯ ಪ್ರಸ್ತಾಪ ವಾದಾಗ ಸಚಿವ ಕೆ.ಜೆ.ಜಾರ್ಜ್ ಕೆಐಓಸಿಎಲ್ನ ಟೌನ್‌ಶಿಪ್ ಏನಾಯಿತು ಎಂದು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಕಳಸವನ್ನು ಹೊಸ ತಾಲೂಕಾಗಿ ಘೋಷಿಸಲಾಗಿದೆ. ಟೌನ್‌ಶಿಪ್ ಕಳಸದಿಂದ ಕೇವಲ 10 ಕಿ.ಮೀ. ದೂರದಲ್ಲಿದೆ. ಅಲ್ಲಿನ ಕಟ್ಟಡಗಳನ್ನು ತಾಲೂಕು ಕಚೇರಿ ಹಾಗೂ ಇನ್ನಿತರೆ ಸರ್ಕಾರಿ ಕಚೇರಿಗಳಿಗೆ ಬಳಸಿಕೊಳ್ಳಲು ಉದ್ದೇಶಿಸಲಾಗಿದ್ದು, ಶೀಘ್ರದಲ್ಲಿಯೇ ಸರ್ಕಾ ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು.
ಸಿಎಂ ಬಳಿಗೆ ನಿಯೋಗ: ಕಳೆದ ವರ್ಷಕೊಡಗಿನಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾ ದಾಗ ಕಾಫಿ ಬೆಳೆಗಾರರಿಗೆ ವಿಶೇಷ ಪ್ಯಾಕೇಜ ಅನ್ನು ರಾಜ್ಯ ಸರ್ಕಾರದಿಂದ ನೀಡಲಾಗಿದೆ. ಹಾಗಾಗಿ, ನಮ್ಮ ಜಿಲ್ಲೆಗೂ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು. ನಷ್ಟವಾಗಿರುವ ಬಗ್ಗೆ ಜಿಲ್ಲಾಡಳಿತದಿಂದ ಸರ್ಕಾರಕ್ಕೆ ಪ್ರಸ್ತಾವನೆಯೂ ಹೋಗಿದೆ ಎಂದು ಶಾಸಕ ಸಿ.ಟಿ.ರವಿ ಹೇಳಿದರು.