Advertisement

ಲಾಕ್ ಡೌನ್ : ಮಂಗಳೂರು ಚೆಕ್ ಪೋಸ್ಟ್ ಗಳಲ್ಲಿ ವಾಹನಗಳ ತಪಾಸಣೆ

02:51 PM Apr 28, 2021 | Team Udayavani |

ಮಂಗಳೂರು :  ಲಾಕ್ ಡೌನ್ ಹಿನ್ನೆಲೆಯಲ್ಲಿ ಬಂದರು ನಗರಿ ಮಂಗಳೂರು ನಲ್ಲಿ ಇಂದು ಬೆಳಿಗ್ಗೆ 6 ಗಂಟೆಯಿಂದ 10 ಗಂಟೆ ವರೆಗೆ ಅಗತ್ಯ ವಸ್ತುಗಳ ಖರೀದಿಗೆ  ಅವಕಾಶ ನೀಡಲಾಗಿತ್ತು.

Advertisement

ಆದರೆ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಮಾರುಕಟ್ಟೆಗೆ ಬಂದಿರಲಿಲ್ಲ. ಬೆಳಿಗ್ಗೆ 10 ಗಂಟೆಯ ಬಳಿಕ ನಗರದ ವಿವಿಧೆಡೆ ಪೊಲೀಸರು ಚೆಕ್ ಪೋಸ್ಟ್ ಗಳಲ್ಲಿ ವಾಹನಗಳ ತಪಾಸಣೆ ನಡೆಸಿದರು. ಅನಗತ್ಯ ವಾಗಿ ಸಂಚರಿಸುವವರ ವಿರುದ್ಧ ಎಚ್ಚರಿಕೆ ನೀಡಿದರು.

ಮಂಗಳೂರು ಪೊಲೀಸ್ ಆಯುಕ್ತ ಶಶಿ ಕುಮಾರ್ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ .ಸರಕಾರದ ಮಾರ್ಗ ಸೂಚಿಯನ್ನು  ಕಟ್ಟು ನಿಟ್ಟಾಗಿ ಪಾಲಿಸುವಂತೆ  ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ ಕೆ ವಿ ರಾಜೇಂದ್ರ ಜನರಲ್ಲಿ ಮನವಿ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next