Advertisement

ಬೆಳ್ಳಾರೆ ಪೊಲೀಸ್ ಠಾಣೆಗೆ ಪೊಲೀಸ್ ಮಹಾ ನಿರೀಕ್ಷಕ ಚಂದ್ರಗುಪ್ತ ಭೇಟಿ

05:22 PM Apr 04, 2023 | Team Udayavani |

ಸುಳ್ಯ: ಪಶ್ಚಿಮ ವಲಯ ಪೊಲೀಸ್ ಮಹಾ ನಿರೀಕ್ಷಕ ಚಂದ್ರಗುಪ್ತ ಐಪಿಎಸ್ ಅವರು ಮಂಗಳವಾರ ಬೆಳ್ಳಾರೆ ಪೊಲೀಸ್ ಠಾಣೆಗೆ ಭೇಟಿ ನೀಡಿದರು.

Advertisement

ಚುನಾವಣೆ ಹಿನ್ನಲೆಯಲ್ಲಿ ವಿಟ್ಲ, ಪುತ್ತೂರು ಪೊಲೀಸ್ ಠಾಣೆಗೆ ಭೇಟಿ ನೀಡಿದ ಚಂದ್ರಗುಪ್ತ ಅವರು ಬಳಿಕ ಬೆಳ್ಳಾರೆ ಪೊಲೀಸ್ ಠಾಣೆಗೆ ಭೇಟಿ ನೀಡಿದರು. ಈ ವೇಳೆ ಪೊಲೀಸರಿಂದ ಗೌರವ ವಂದನೆ ಸಲ್ಲಿಸಲಾಯಿತು.

ಬಳಿಕ ಠಾಣೆಯಲ್ಲಿ ಸಾರ್ವಜನಿಕ ಸಭೆ ನಡೆಸಿದ ಅವರು ಚುನಾವಣೆ ಬಗ್ಗೆ ಮಾಹಿತಿ ಪಡೆದರು. ಸಾರ್ವಜನಿಕ ಅಹವಾಲು ಸ್ವೀಕರಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಧರ್ಮಪ್ಪ ಎನ್.ಎಂ., ಪುತ್ತೂರು ಡಿವೈಎಸ್ಪಿ ಡಾ.ವೀರಯ್ಯ ಹಿರೇಮಠ್, ಸುಳ್ಯ ವೃತ್ತ ನಿರಿಕಕ್ಷಕ ರವೀಂದ್ರ, ಬೆಳ್ಳಾರೆ ಪೊಲೀಸ್ ಉಪನಿರೀಕ್ಷಕ ಸುಹಾಸ್, ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು, ಸಾರ್ವಜನಿಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ: 5 ವರ್ಷದ ಹಿಂದೆ ಕೇರಳದಲ್ಲಿ ನಡೆದಿದ್ದ ಬುಡಕಟ್ಟು ಯುವಕನ ಕೊಲೆ ಪ್ರಕರಣ: 14 ಮಂದಿ ದೋಷಿ

Advertisement
Advertisement

Udayavani is now on Telegram. Click here to join our channel and stay updated with the latest news.

Next