Advertisement

ಇನ್ಸ್ಪಾಯರ್ ಅವಾರ್ಡ್ ಸ್ಪರ್ಧೆ: ಶಿರಸಿ ವಿದ್ಯಾರ್ಥಿಗಳಿಗೆ ಪ್ರಶಸ್ತಿ

10:07 PM Sep 21, 2022 | Team Udayavani |

ಶಿರಸಿ: ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ 2020-21 ನೇ ಸಾಲಿನ ರಾಷ್ಟ್ರಮಟ್ಟದ ಇನ್ಸ್ಪಾಯರ್ ಅವಾರ್ಡ್ ಸ್ಪರ್ಧೆಯಲ್ಲಿ ನಗರದ ಗಣೇಶನಗರ ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳಾದ ಧನ್ಯಾ ಆಚಾರಿ, ಸಾಯಿನಾಥ ಮಾಲದಕರ ಪ್ರಶಸ್ತಿ ಪಡೆದಿದ್ದಾರೆ.

Advertisement

ಧನ್ಯಾ ಆಚಾರಿ ಪ್ರದರ್ಶಿಸಿದ ವಿವಿಧ ತೆರನ ಬೀಜ ಒಡೆಯುವ ಯಂತ್ರ ಮತ್ತು ಸಾಯಿನಾಥ ತಯಾರಿಸಿದ ಮಣ್ಣನ್ನು ತೆಗೆದು ಗಿಡ ನೆಡುವ ಸಾಧನಕ್ಕೆ ಪ್ರಶಸ್ತಿ ಲಭಿಸಿದೆ. ವಿಜ್ಞಾನ ಮತ್ತು ತಂತ್ರಜ್ಞಾನ ಕೇಂದ್ರ ಸಚಿವ ಜೀತೇಂದ್ರಪ್ರಸಾದ್ ಪ್ರಶಸ್ತಿ ವಿತರಿಸಿದ್ದಾರೆ.

ಈ ಇಬ್ಬರು ವಿದ್ಯಾರ್ಥಿಗಳ ಪಾಲಕರು ಬಡವರಾಗಿದ್ದು, ಕೂಲಿ ಮಾಡಿ ಜೀವನ ಸಾಗಿಸುತ್ತಿದ್ದಾರೆ. ಮುಂದಿನ ತಿಂಗಳು ದೆಹಲಿಯಲ್ಲಿ ಇನ್ನೋವೇಷನ್ ಆಂಡ್ ಇಂಟರ್‌ಪ್ರೆನ್ಯುರ್‌ಶಿಪ್ ಕಾರ್ಯಕ್ರಮದಲ್ಲಿ ನಡೆಯಲಿದೆ. ಆ ಬಳಿಕ ಈ ವಿದ್ಯಾರ್ಥಿಗಳು ಜಪಾನಿನಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ವಿಜ್ಞಾನ ಮೇಳದಲ್ಲಿ ಪಾಲ್ಗೊಳ್ಳಲಿದ್ದಾರೆ. ಇದೇ ಶಾಲೆಯ ಇನ್ನೋರ್ವ ವಿದ್ಯಾರ್ಥಿನಿ ಸುಮನಾ ಗೋಸಾವಿ ಸಹ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಗೊಂಡಿದ್ದರು. ವಿಜ್ಞಾನ ಶಿಕ್ಷಕ ಕೆ.ಎಲ್.ಭಟ್ ಈ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದರು.

ವಿದ್ಯಾರ್ಥಿಗಳ ಸಾಧನೆ ಮತ್ತು ಶಿಕ್ಷಕರ ಮಾರ್ಗದರ್ಶನವನ್ನು ಡಿಡಿಪಿಐ ಪಿ.ಬಸವರಾಜ ಮತ್ತು ಶಿರಸಿ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಸ್.ಹೆಗಡೆ ಪ್ರಶಂಸಿಸಿ ಸನ್ಮಾನಿಸಿ ಗೌರವಿಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next