Advertisement

Congress ಸರ್ಕಾರಕ್ಕೆ ಅಸ್ಥಿರತೆ ಕಾಡಲಾರಂಭಿಸಿದೆ : ಯಡಿಯೂರಪ್ಪ

05:15 PM Aug 14, 2023 | Team Udayavani |

ಶಿವಮೊಗ್ಗ: ರಾಜ್ಯ ಸರ್ಕಾರಕ್ಕೆ ಅಸ್ಥಿರತೆ ಕಾಡಲಾರಂಭಿಸಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ಬಗ್ಗೆ ಒಂದಾದ ಮೇಲೆ ಒಂದರಂತೆ ಮಂತ್ರಿಗಳ ಮೇಲೆ ಭ್ರಷ್ಟಾಚಾರದ ಆರೋಪ ಬರುತ್ತಿವೆ. ಯಾವ ಮಂತ್ರಿಗಳ ಮೇಲೆ ಭ್ರಷ್ಟಾಚಾರದ ಆರೋಪವಿದೆ ಅವರ ವಿರುದ್ಧ ತನಿಖೆ ಮಾಡಿ, ತಪ್ಪು ಮಾಡಿರುವುದು ತಿಳಿದು ಬಂದರೆ ಸಂಪುಟದಿಂದ ಕೈಬಿಡಬೇಕು ಎಂದು ಆಗ್ರಹಿಸಿದರು.

ಕೃಷಿ ಸಚಿವ ಚಲುವರಾಯ ಸ್ವಾಮಿ ಮೇಲೆ ಅಧಿಕಾರಿಗಳಿಂದಲೇ ಭ್ರಷ್ಟಾಚಾರ ಆರೋಪ ಕೇಳಿ ಬಂದಿದೆ. ಅಧಿಕಾರಿಗಳು ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಸರ್ಕಾರದ ಮುಖ್ಯ ಕಾರ್ಯದರ್ಶಿಯವರು ಈ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ ಎಂದರು.

ರಾಜ್ಯ ಸರ್ಕಾರ ಇನ್ನು ಆರು ತಿಂಗಳಲ್ಲಿ ಬೀಳಲಿದೆ ಎಂಬ ಬಸವರಾಜ ಯತ್ನಾಳ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು,ರಾಜ್ಯ ಸರ್ಕಾರಕ್ಕೆ ಅಸ್ಥಿರತೆ ಕಾಡಲಾರಂಭಿಸಿದೆ. ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಆಕಾಂಕ್ಷಿಗಳ ಪಟ್ಟಿ ಶೀಘ್ರವೇ ತಯಾರಿಸಲಾಗುವುದು. ಹಿಂದಿನ ಚುನಾವಣೆಯಂತೆ ಈ ಬಾರಿ ಚುನಾವಣೆಯಲ್ಲಿಯೂ ಬಿಜೆಪಿ 25 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next