Advertisement

ಗ್ರಾಪಂ ವ್ಯಾಪ್ತಿಯಲ್ಲಿ ಕ್ವಾರೆಂಟೈನ್‌ ಕೇಂದ್ರ ಸ್ಥಾಪಿಸಿ

07:37 AM May 30, 2020 | Team Udayavani |

ಕೊಪ್ಪ: ತಾಲೂಕಿನ ಪ್ರತಿ ಗ್ರಾಪಂ ವ್ಯಾಪ್ತಿಯ ಒಂದು ಶಾಲೆಯನ್ನು ಗುರುತಿಸಿ, ಕೋವಿಡ್ ಗೆ ಸಂಬಂಧಪಟ್ಟಂತೆ ಪ್ರತ್ಯೇಕ ಕೊಠಡಿಗಳಲ್ಲಿ ಕ್ವಾರೈಂಟೈನ್‌ಗೆ ಅಗತ್ಯವಾದ ಎಲ್ಲಾ ರೀತಿಯ ಕ್ರಮ ಕೈಗೊಳ್ಳಬೇಕೆಂದು ಸಂಸದೆ ಶೋಭಾ ಕರಂದ್ಲಾಜೆ ಅಧಿಕಾರಿಗಳಿಗೆ ಸೂಚಿಸಿದರು.

Advertisement

ಬಾಳಗಡಿಯ ತಾಪಂ ಸಭಾಂಗಣದಲ್ಲಿ ನಡೆದ ಕೋವಿಡ್  ಟಾಸ್ಕ್ ಫೋರ್ಸ್‌ ಸಭೆಯಲ್ಲಿ ಮಾತನಾಡಿದ ಅವರು, ಕೋವಿಡ್ ವೈರಸ್‌ ಮುಂದಿನ ದಿನಗಳಲ್ಲಿ ಯಾವ ರೀತಿಯಲ್ಲಿ ಪರಿಣಾಮ ಬೀರುತ್ತದೆ ಎಂದು ನಿರೀಕ್ಷಿಸಲು ಆಸಾಧ್ಯವಾಗಿದೆ. ಆದ್ದರಿಂದ ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳುವುದು ಸೂಕ್ತ ಎಂದರು.

ತಾಲೂಕು ವೈದ್ಯಾಧಿಕಾರಿ ಮಹೇಂದ್ರ ಕಿರೀಠಿ ಮಾತನಾಡಿ, ಕೊಪ್ಪದಲ್ಲಿ ಸಾಂಸ್ಥಿಕ ಕ್ವಾರೆಂಟೈನ್‌ ಮಾಡಲಾಗಿದ್ದ 10 ಜನರಲ್ಲಿ ಕೋವಿಡ್ ಪಾಸಿಟಿವ್‌ ಸೋಂಕು ಕಾಣಿಸಿಕೊಂಡಿದೆ. ಇವರು ಮುಂಬೈನಿಂದ ಬಂದವರು. ಅದರಲ್ಲಿಯೂ ಎನ್‌. ಆರ್‌ ಪುರ ಮೂಲದ ಎಂಟು ಜನ ಹಾಗೂ ತೀರ್ಥಹಳ್ಳಿ ಮೂಲದ ಒಬ್ಬರು ಹಾಗೂ ಕೊಪ್ಪದ ಒಬ್ಬ ವ್ಯಕ್ತಿಗೆ ಸೋಂಕು ದೃಢಪಟ್ಟಿದೆ. ಇವರನ್ನು ಜಿಲ್ಲೆಯ ಕೋವಿಡ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿಸಿದರು. ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿ ಡಾ| ಗಾನವಿ, ಆಹಾರ ನಿರೀಕ್ಷಕ ಶ್ರೀಕಾಂತ್‌, ತಾಪಂ ಇಒ ನವೀನ್‌ ಕುಮಾರ್‌ ಮಾತನಾಡಿದರು.

ಸಭೆಯಲ್ಲಿ ಶಾಸಕ ರಾಜೇಗೌಡ, ಜಿಪಂ ಅಧ್ಯಕ್ಷೆ ಸುಜಾತಾ ಕೃಷ್ಣಪ್ಪ, ತಾಪಂ ಅಧ್ಯಕ್ಷೆ ಜಯಂತಿ ನಾಗರಾಜ್‌, ಜಿಪಂ ಸ್ಥಾಯಿ ಸಮಿತಿ ಅಧ್ಯಕ್ಷೆ ದಿವ್ಯಾ ದಿನೇಶ್‌, ಸದಸ್ಯರಾದ ಎಸ್‌.ಎನ್‌. ರಾಮಸ್ವಾಮಿ, ಡಿವೈಎಸ್‌ಪಿ ರಾಜು ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next