Advertisement

ಜು. 31ರೊಳಗೆ ಖಾಸಗಿ ಆಸ್ಪತ್ರೆಗಳಿಗೆ ಕೆಪಿಎಂಇ ನೋಂದಣಿ ಸಂಖ್ಯಾ ಫ‌ಲಕ ಅಳವಡಿಕೆ ಕಡ್ಡಾಯ

09:57 PM Jun 08, 2024 | Team Udayavani |

ಬೆಂಗಳೂರು: ನಕಲಿ ವೈದ್ಯರ ಹಾವಳಿಯನ್ನು ತಡೆಗಟ್ಟುವ ಉದ್ದೇಶದಿಂದ ಖಾಸಗಿ ಆಸ್ಪತ್ರೆ ಮತ್ತು ಕ್ಲಿನಿಕ್‌ಗಳು ಕಡ್ಡಾಯವಾಗಿ ಎಲ್ಲರಿಗೂ ಕಾಣುವ ರೀತಿಯಲ್ಲಿ, ಖಾಸಗಿ ವೈದ್ಯಕೀಯ ಸಂಸ್ಥೆಗಳ (ಕೆಪಿಎಂಇ) ನೋಂದಣಿ ಸಂಖ್ಯಾ ಫಲಕವನ್ನು ಜು. 31ರೊಳಗೆ ಆಳವಡಿಸುವುದನ್ನು ಕಡ್ಡಾಯಗೊಳಿಸಿ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.

Advertisement

ಖಾಸಗಿ ಆಸ್ಪತ್ರೆಗಳು ಕೆಪಿಎಂಇ ನೋಂದಣಿ ಸಂಖ್ಯೆ, ಆಸ್ಪತ್ರೆ ಹೆಸರು, ಮಾಲಕರ ಹೆಸರನ್ನು ಕಟ್ಟಡದ ಮುಂಭಾಗದಲ್ಲಿ ಪ್ರದರ್ಶಿಸಬೇಕು. ಅಲೋಪತಿ ಆಸ್ಪತ್ರೆಗಳು ಆಕಾಶ ನೀಲಿ ಬಣ್ಣ ಮತ್ತು ಆಯುರ್ವೇದ ಆಸ್ಪತ್ರೆಗಳು ತಿಳಿಹಸುರು ಬಣ್ಣದ ಬೋರ್ಡ್‌ ಬಳಸುವಂತೆ ಸೂಚಿಸಲಾಗಿದೆ. ನಿಯಮ ಉಲ್ಲಂ ಸಿದಲ್ಲಿ ಕಠಿನ ಕಾನೂನುಕ್ರಮ ಜರಗಿಸಲು ಆದೇಶಿಸಿದ್ದಾರೆ.

ನಕಲಿ ಮತ್ತು ಅರ್ಹರಲ್ಲದ ವೈದ್ಯರು ಸಮಾಜಕ್ಕೆ ಕಂಟಕರಾಗಿದ್ದು, ರೋಗಿಗಳ ಆರೋಗ್ಯದ ವಿಚಾರದಲ್ಲಿ ಚೆಲ್ಲಾಟವಾಡುತ್ತಿದ್ದಾರೆ. ರೋಗಿಗಳ ಸುರಕ್ಷೆಗೆ ಸರಕಾರ ಬದ್ಧವಾಗಿದೆ. -ದಿನೇಶ್‌ ಗುಂಡೂರಾವ್‌,  ಆರೋಗ್ಯ ಸಚಿವ

Advertisement

Udayavani is now on Telegram. Click here to join our channel and stay updated with the latest news.

Next