ಕುಂದಾಪುರ : ತೀರ್ಥಹಳ್ಳಿ- ಕುಂದಾಪುರ ರಾಜ್ಯ ಹೆದ್ದಾರಿ ಹಾದುಹೋಗುವ ಹೊಸಂಗಡಿ ಪೇಟೆಯಲ್ಲಿ ಬೆಳಕಿನ ವ್ಯವಸ್ಥೆಯಿಲ್ಲದೆ ಕತ್ತಲ ಕೂಪದಂತಿದ್ದು, ಕೊನೆಗೂ ಎಚ್ಚೆತ್ತುಕೊಂಡ ಹೊಸಂಗಡಿ ಗ್ರಾ.ಪಂ. ವಿದ್ಯುತ್ ದೀಪದ ವ್ಯವಸ್ಥೆಯನ್ನು ಮಾಡಿದೆ.
ಕುಂದಾಪುರದಿಂದ ಶಿವಮೊಗ್ಗಕ್ಕೆ ಸಂಚರಿಸುವ ಬಾಳೆಬರೆ ಘಾಟಿ ಮಾರ್ಗದಲ್ಲಿ ಹೊಸಂಗಡಿಯು ಒಂದು ಪ್ರಮುಖ ಪೇಟೆಯಾಗಿದ್ದು, ನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ಆದರೆ ಇಲ್ಲಿ ಸರಿಯಾದ ಬೆಳಕಿನ ವ್ಯವಸ್ಥೆ ಮಾತ್ರ ಇರಲಿಲ್ಲ ಪೇಟೆಯಿಡೀ ಬೆಳಕಿನ ವ್ಯವಸ್ಥೆಯಿಲ್ಲದ ಕಾರಣ ಅಲ್ಲಿ ರಸ್ತೆ ದಾಟುವ ಪಾದಚಾರಿಗಳು ನಿತ್ಯ ತೊಂದರೆ ಅನುಭವಿಸುತ್ತಿದ್ದರು.
ಈ ಬಗ್ಗೆ ಸಾರ್ವಜನಿಕರು ಪಂಚಾಯತ್ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದು, ಬೆಳಕಿನ ವ್ಯವಸ್ಥೆ ಕಲ್ಪಿಸಲು ಒತ್ತಾಯಿಸಿದ್ದರು. ಕೊನೆಗೂ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿದ ಹೊಸಂಗಡಿ ಪಂಚಾಯತ್, ಬೆಳಕಿನ ವ್ಯವಸ್ಥೆಯನ್ನು ಅಳವಡಿಸಿದ್ದಾರೆ.