Advertisement
ರಾಜ್ಯ ಸರ್ಕಾರದ ನಿರ್ಲಕ್ಷ್ಯ: ಉತ್ತರ ಕರ್ನಾಟಕದ ನೆರೆ, ರಾಜ್ಯದಲ್ಲಿ ಉಂಟಾಗಿರುವ ಬರ ಪರಿಸ್ಥಿತಿಯಲ್ಲಿ ನಿರ್ವಹಿಸುವಲ್ಲಿ ನಿರ್ಲಕ್ಷ್ಯ ತೋರುತ್ತಿದ್ದು, ಕೇವಲ ಅಧಿಕಾರದಲ್ಲಿ ಉಳಿಯಲು ಕಸರತ್ತು ನಡೆಸುವುದರಲ್ಲಿಯೇ ಕಾಲಹರಣ ಮಾಡಲಾಗುತ್ತಿದೆ. ರಾಜ್ಯದ ಜನತೆಯ ಹಿತ ಕಾಪಾಡುವಲ್ಲಿ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಮುುಖ್ಯಮಂತ್ರಿ ಯಡಿಯೂರಪ್ಪ ಒಬ್ಬಂಟಿಗರಾಗಿದ್ದು ಕೇಂದ್ರ ಸರಕಾರವಾಗಲೀ ಸಚಿವರಾಗಲೀ ಅಗತ್ಯವಾದ ಸಹಕಾರ ನೀಡುತ್ತಿಲ್ಲ ಎಂದು ಹೇಳಿದರು.
Related Articles
Advertisement
ಹೆಬ್ಟಾಳ ಶಾಸಕ ಬೈರತಿ ಸುರೇಶ್ ಮಾತನಾಡಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ವಲಸಿಗರು ಎಂದು ಟೀಕಿಸುವ ಯಾವುದೇ ನೈತಿಕ ಹಕ್ಕು ಎಂಟಿಬಿ ನಾಗರಾಜ್‌ಗಿಲ್ಲ. ಇದೀಗ ತಾಲೂಕಿನಲ್ಲಿ ಬಚ್ಚೇಗೌಡರ ಶ್ರಮಪಟ್ಟು ನಿರ್ಮಿಸಿದ ಮನೆಗೆ ಹಾವಿನಂತೆ ನುಸುಳುತ್ತಿರುವ ಎಂಟಿಬಿ ನಾಗರಾಜ್ ಯಾರು ಎಂದು ಪ್ರಶ್ನಿಸಿದರು. ತಮ್ಮ ಹಣ ಬಲದಿಂದ ಮತದಾರರನ್ನು ಕೊಳ್ಳಬಹುದು ಎಂಬ ವಿಶ್ವಾಸವಿರುವ ವ್ಯಕ್ತಿಗಳಿಗೆ ಮತದಾರರು ಸೂಕ್ತ ಪಾಠ ಕಲಿಸಬೇಕು.
ಪೊಲೀಸ್ ಇಲಾಖೆ ದುರುಪಯೋಗ ಪಡಿಸಕೊಂಡು ಕಾರ್ಯಕರ್ತರ ವಿರುದ್ಧ ಸುಳ್ಳು ಮೊಕದ್ದಮೆ ಹಾಕಿ ಬೆದರಿಕೆ ಹಾಕಿ ಅವರ ಆತ್ಮಸ್ಥೈರ್ಯ ಕುಗ್ಗಿಸಲು ಪ್ರಯತ್ನಿಸಲಾಗುತ್ತಿದೆ. ಇಂತಹ ಷಡ್ಯಂತ್ರಗಳಿಂದ ವಿಚಲಿತರಾಗದೆ ಕಾರ್ಯಕರ್ತರು ಧೈರ್ಯದಿಂದ ಪಕ್ಷದ ಸಂಘಟನೆಯಲ್ಲಿ ತೊಡಗಬೇಕು ಎಂದರು.
ವೀಕ್ಷಕರಾಗಿ ಆಗಮಿಸಿದ್ದ ಎಐಸಿಸಿ ಪ್ರಧಾನ ಕಾರ್ಯದರ್ಶಿ ವಿಷ್ಣುನಾಥನ್ ಮಾತನಾಡಿ, ರಾಜ್ಯದಲ್ಲಿ ಹಿಂದೆ ನಡೆದ ಎಲ್ಲಾ ಉಪ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷ ಜಯಗಳಿಸಿದು, ಉತ್ತಮ ಸಾಧನೆ ಮಾಡಿದೆ. ಈಗಲೂ ಸಹ ಅದೇ ಹುಮ್ಮಸ್ಸಿನಿಂದ ಚುನಾವಣೆ ಎದುರಿಸಲಿದೆ ಎಂದರು. ಬಂಗಾರಪೇಟೆ ಶಾಸಕ ನಾರಾಯಣಸ್ವಾಮಿ, ಮಾಲೂರು ಶಾಸಕ ನಂಜೇಗೌಡ, ಕ್ಷೇತ್ರದ ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮಾವತಿ ಸುರೇಶ್, ಎಐಸಿಸಿ ಸದಸ್ಯೆ ಕಮಲಾಕ್ಷಿ ರಾಜಣ್ಣ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮುನಿಶಾಮಣ್ಣ ಇನ್ನಿತರರು ಉಪಸ್ಥಿತರಿದ್ದರು.