Advertisement

ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ಸಂಪುಟ ಅನುಮೋದನೆ: ಚವ್ಹಾಣ

06:29 PM Sep 04, 2020 | Suhan S |

ಯಾದಗಿರಿ: ಯಾದಗಿರಿಯಲ್ಲಿ ನೂತನವಾಗಿ ಆರಂಭವಾಗಲಿರುವ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮತ್ತಷ್ಟು ಸುಸಜ್ಜಿತವಾಗಿ ಕಾರ್ಯ ನಿರ್ವಹಣೆಗೆ ಪರಿಷ್ಕೃತ 309 ಕೋಟಿ ರೂ. ಅನುಮೋದನೆ ನೀಡಲಾಗಿದ್ದು ಸಂತಸ ತಂದಿದೆ ಎಂದು ಪಶುಸಂಗೋಪನೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಹರ್ಷ ವ್ಯಕ್ತಪಡಿಸಿದ್ದಾರೆ.

Advertisement

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ವಿಶ್ವ ಆರೋಗ್ಯ ಸಂಸ್ಥೆ ನಿಯಮಗಳನ್ವಯ ಪ್ರತಿ 1 ಸಾವಿರ ಜನಸಂಖ್ಯೆಗೆ ಒಬ್ಬ ವೈದ್ಯರು ಇರಬೇಕಾಗಿದ್ದು, ಸದ್ಯ ಕರ್ನಾಟಕದಲ್ಲಿ 13556 ಜನಸಂಖ್ಯೆಗೆ ಒಬ್ಬ ವೈದ್ಯರು ಇದ್ದಾರೆ. ಈ ಅಸಮತೋಲನ ಸರಿಪಡಿಸಲು ಹಾಗೂ ರಾಜ್ಯದ ಬಡ-ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣದಲ್ಲಿ ಹೆಚ್ಚಿನ ಅವಕಾಶ ಕಲ್ಪಿಸುವುದಕ್ಕಾಗಿ ಸರ್ಕಾರ ವೈದ್ಯಕೀಯ ಕಾಲೇಜು ಇರದ ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜು ಆರಂಭಿಸಲು ನಿರ್ಧರಿಸಿದ್ದು ಅತ್ಯಂತ ಸಂತೋಷದ ವಿಷಯವಾಗಿದೆ ಎಂದಿದ್ದಾರೆ.

ಯಾದಗಿರಿ ಜಿಲ್ಲೆ ಮುದ್ನಾಳ ಗ್ರಾಮದಲ್ಲಿ ಸ್ವಾಯತ್ತ ಸಂಸ್ಥೆಯ ಸ್ಥಾನಮಾನದೊಂದಿಗೆ 15ಒ ಸೀಟುಗಳ ಪ್ರವೇಶವುಳ್ಳ “ವೈದ್ಯಕೀಯ ವಿಜ್ಞಾನಗಳ ಸಂಸ್ಥೆ’ ಹೆಸರಿನಲ್ಲಿ ಹೊಸ ವೈದ್ಯಕೀಯ ಕಾಲೇಜು ಆರಂಭವಾಗಲಿದ್ದು, ಕಟ್ಟಡ ನಿರ್ಮಾಣ ಕಾಮಗಾರಿ 281 ಕೋಟಿ ವೆಚ್ಚದಲ್ಲಿ ನಡೆಯುತ್ತಿದ್ದು, ಅದನ್ನು ರೂ.309 ಕೋಟಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಈ ಭಾಗದಲ್ಲಿ ವೈದ್ಯಕೀಯ ಕಾಲೇಕು ಅವಶ್ಯಕವಾಗಿತ್ತು. ಜನರ ಆರೋಗ್ಯದ ದೃಷ್ಟಿಯಿಂದ ನಮ್ಮ ಸರ್ಕಾರ ಪ್ರತಿ ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜು ನೀಡುತ್ತಿರುವುದು ರಾಜ್ಯದ ಪ್ರತಿ ಸರ್ಕಾರದ ಮತ್ತು ಮುಖ್ಯಮಂತ್ರಿಗಳ ಕಾಳಜಿ ಎತ್ತಿ ತೋರಿಸುತ್ತದೆ ಎಂದಿರುವ ಅವರು, ಮುಖ್ಯಮಂತ್ರಿ ಬಿಎಸ್‌ ವೈ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಅಶ್ವಥ ನಾರಾಯಣ್‌ ಅವರಿಗೆ ಧನ್ಯವಾದ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next