Advertisement

ವರದಿ ಸಲ್ಲಿಸಲು ಸಿಐಡಿಗೆ ಸೂಚನೆ

05:23 AM Jul 05, 2020 | Team Udayavani |

ಬೆಂಗಳೂರು: ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ ನಿಯಮಿತ ಹಾಗೂ ಗುರು ಸಾರ್ವಭೌಮ ಸೌಹಾರ್ದ ಕ್ರೆಡಿಟ್‌ ಕೋ-  ಆಪರೇಟಿವ್‌ ಲಿಮಿಟೆಡ್‌ನ‌ ಠೇವಣಿದಾರರ ಹಣ ದುರ್ಬಳಕೆ ಹಾಗೂ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿ  ಸಿದಂತೆ ತನಿಖಾ ವರದಿ ಸಲ್ಲಿಸುವಂತೆ ಹೈಕೋರ್ಟ್‌ ಸಿಐಡಿಗೆ ನಿರ್ದೇಶಿಸಿದೆ.

Advertisement

ಹಗರಣದ ತನಿಖೆಗೆ ಡಿಐಜಿ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸುವಂತೆ ಡಿಜಿಪಿಗೆ ನಿರ್ದೇಶಿಸುವಂತೆ ಕೋರಿ ಬಸವನಗುಡಿ ನಿವಾಸಿ ಕೆ.ಆರ್‌.ನರಸಿಂಹಮೂರ್ತಿ ಮತ್ತಿತರರು  ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್‌.ಓಕಾ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಈ ಸೂಚನೆ ನೀಡಿತು

. ಅರ್ಜಿಯ ಹಿಂದಿನ ವಿಚಾರಣೆ ವೇಳೆ ಪ್ರಕರಣದ  ಸಂಬಂಧ ಎಸಿಬಿ, ಸಿಐಡಿ ಎರಡೂ ಪ್ರತ್ಯೇಕ ಎಫ್‌ಐಆರ್‌ ದಾಖಲಿಸಿವೆ. ಅವುಗಳನ್ನು ಒಂದೇ ಕಡೆ ಸೇರಿಸುವ ಬಗ್ಗೆ ರಾಜ್ಯ ಸರ್ಕಾರ ನಿರ್ಧಾರ ಕೈಗೊಳ್ಳಬೇಕು ಎಂದು ಹೈಕೋರ್ಟ್‌ ನಿರ್ದೇಶನ ನೀಡಿತ್ತು. ಅರ್ಜಿ ಶುಕ್ರವಾರ ವಿಚಾರಣೆಗೆ  ಬಂದಾಗ, ಅರ್ಜಿದಾರರ ಪರ ವಕೀಲರು, ಸರ್ಕಾರ ಪ್ರಕರಣದ ತನಿಖೆ ಸಿಐಡಿಗೆ ವಹಿಸಿದೆ ಎಂದರು.

ಅದನ್ನು ಪರಿಗಣಿಸಿದ ನ್ಯಾಯಪೀಠ, ಪ್ರಕರಣ ತನಿಖಾ ವರದಿಯನ್ನು ಅರ್ಜಿ ಕುರಿತ ಮುಂದಿನ ವಿಚಾರಣೆ ವೇಳೆ ಸಿಐಡಿ ನ್ಯಾಯಾಲಯಕ್ಕೆ ಸಲ್ಲಿಸಬೇಕು. ಬ್ಯಾಂಕಿನ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಬೇಕೆಂಬ ಅರ್ಜಿದಾರರ ಮನವಿಯನ್ನು ಸಿಐಡಿ ಪರಿಗಣಿಸಬೇಕು. ಬ್ಯಾಂಕಿನ ನಿರ್ವಹಣೆಗಾಗಿ ಸರ್ಕಾರ ನೇಮಿಸಿರುವ ಆಡಳಿತಾಧಿಕಾರಿಯು ಸಾಲ ವಸೂಲಾತಿ ಕುರಿತು ವಸ್ತುಸ್ಥಿತಿ  ವರದಿ ಸಲ್ಲಿಸಬೇಕು ಎಂದು ನಿರ್ದೇಶಿಸಿ ವಿಚಾರಣೆ ಜು.20ಕ್ಕೆ ಮುಂದೂಡಿತು.

Advertisement

Udayavani is now on Telegram. Click here to join our channel and stay updated with the latest news.

Next