Advertisement
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಈ ಸೂಚನೆ ನೀಡಿದ ಅವರು, ಅರ್ಹ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಸರ್ಕಾರ ರೂಪಸಿರುವ ಸಾಲ ಮತ್ತು ಸಹಾಯಧನ ಯೋಜನೆಗಳ ಸೌಲಭ್ಯ ಸಕಾಲಕ್ಕೆ ದೊರಕಿಸಿ ಕೊಡಲು ಮುಂದಾಗಬೇಕು. ಸಾಲ ನೀಡಲು ಮುಂಗಡ ಠೇವಣಿ ಹಣ ಪಡೆಯದಂತೆ ಬ್ಯಾಂಕ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
Related Articles
Advertisement
ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಅರ್ಹ ಫಲಾನುಭವಿಗಳಿಗೆ ಸೌಲಭ್ಯ ಕಲ್ಪಿಸುವ ಜೊತೆಗೆ ನಿರಂತರ ಹಾಗೂ ಸಕಾಲಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸಬೇಕು. ತೊರವಿ ಗ್ರಾಮದ ಅಂಗನವಾಡಿ ಕಟ್ಟಡಕ್ಕೆ ಸಂಬಂ ಧಿಸಿದಂತೆ ಅನುದಾನ ಪ್ರಸ್ತಾವನೆ ಸಲ್ಲಿಸಬೇಕು. ನಗರದ ಡಾ| ಬಿ.ಆರ್. ಅಂಬೇಡ್ಕರ್ ವೃತ್ತ ಪುನರ್ ನವೀಕರಣಕ್ಕೆ ಕೈಗೊಳ್ಳುವುದಾಗಿ ಜಿಲ್ಲಾ ಧಿಕಾರಿ ಸುನೀಲಕುಮಾರ ಭರವಸೆ ನೀಡಿದರು. ಅತಾಲಟ್ಟಿ ಗ್ರಾಮದಲ್ಲಿ ವಿದ್ಯುತ್ ಸಮಸ್ಯೆ ನೀಗಿಸಬೇಕು. ಕೆಸರಟ್ಟಿ ಗ್ರಾಮದಲ್ಲಿನ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಬೇಕು. ತೊರವಿ ಗ್ರಾಮದ ಅಂಗನವಾಡಿ ಕಟ್ಟಡವನ್ನು ನಿರ್ಮಿಸಲು ಸೂಕ್ತ ನಿವೇಶನ ಇದ್ದಲ್ಲಿ ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು. ಮುಸಕಿನಾಳ ಗ್ರಾಮದಲ್ಲಿ ಖಾಲಿಯಿರುವ ಅಂಗನವಾಡಿ ಸಹಾಯಕಿ ಹುದ್ದೆಯನ್ನು ಭರ್ತಿ ಮಾಡಿಕೊಳ್ಳಬೇಕು ಎಂದು ಸೂಚಿಸಿದರು.
ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಗೆ ಎಲ್ಲ ರೀತಿಯ ಸಹಕಾರ ನೀಡಿದ್ದಕ್ಕೆ ಎಸ್ಪಿ ಅನುಪಮ್ ಅಗರವಾಲ ಸಮಿತಿ ಸದಸ್ಯರಿಗೆ ಹಾಗೂ ಸಮುದಾಯದ ಜನರಿಗೆ ಅಭಿನಂದನೆ ಸಲ್ಲಿಸಿದರು.
ಜಿಪಂ ಸಿಇಒ ಗೋವಿಂದರೆಡ್ಡಿ, ಸುರೇಶ ಮಣ್ಣೂರ, ಅರವಿಂದ ಸಾಲವಾಡಗಿ, ಶಿವಾನಂದ ಪಟ್ಟೇದ, ರಾಜಶೇಖರ ಕೂಚಬಾಳ, ವಿನಾಯಕ ಗುಣಸಾಗರ, ಪರಶುರಾಮ ಮಾದರ, ಮುತ್ತಣ್ಣ ಸಾಸನೂರ, ಬಸವರಾಜ ಪೂಜಾರಿ, ಮನೋಹರ ಕಾಂಬಳೆ, ಗಣಪತಿ ಬಾಣಿಕೋಲ ಇವರು ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು. ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ರಾಮನಗೌಡ ಸ್ವಾಗತಿಸಿದರು.