Advertisement

ಸಭೆ ನಡೆಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ

08:13 AM Jul 18, 2020 | Suhan S |

ಬೆಂಗಳೂರು: ಕೋವಿಡ್‌-19 ತುರ್ತು ಪರಿಸ್ಥಿತಿ ನಿರ್ವಹಣೆಗಾಗಿ ಅಗತ್ಯ ಕ್ರಮಕೈಗೊಳ್ಳಲು ನಿಯಮಾನುಸಾರ ತಪ್ಪದೇ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ನಿರ್ದೇಶಿಸಲಾಗಿದೆ ಎಂದು ಸರ್ಕಾರ ಹೈಕೋರ್ಟ್‌ ಗೆ ಮಾಹಿತಿ ನೀಡಿದೆ.

Advertisement

ಈ ಕುರಿತು ಲೆಟ್ಜ್ಕಿಡ್‌ ಫೌಂಡೇಷನ್‌ ಹಾಗೂ ವಕೀಲೆ ಗೀತಾ ಮಿಶ್ರಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾ. ಎ.ಎಸ್‌. ಓಕ್‌ ಹಾಗೂ ನ್ಯಾ. ಎಂ. ನಾಗಪ್ರಸನ್ನ ಅವರ ನೇತೃತ್ವದ ವಿಭಾಗೀಯ ಪೀಠಕ್ಕೆ ಸರ್ಕಾರಿ ವಕೀಲರು ಲಿಖೀತ ಮಾಹಿತಿ ನೀಡಿದರು. ಹೈಕೋರ್ಟ್‌ ನಿರ್ದೇಶನದಂತೆ ಜಿಲ್ಲಾ ವಿಪತ್ತು ಪ್ರಾಧಿಕಾರಗಳ ಸಭೆ ನಡೆಸಬೇಕು ಹಾಗೂ ಸಭೆಯ ನಡಾವಳಿಗಳನ್ನು ಕಳುಹಿಸಿಕೊಡಬೇಕು ಎಂದು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್‌ ಜು. 16ರಂದು ಆದೇಶ ಮಾಡಿದ್ದಾರೆ ಎಂದು ತಿಳಿಸಿದ ಸರ್ಕಾರಿ ವಕೀಲರು, ಆ ಕುರಿತ ದಾಖಲೆಯನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು.

ಅಲ್ಲದೆ, ಕುಂದುಕೊರತೆ ನಿವಾರಣಾ ಘಟಕ ಸ್ಥಾಪಿಸುವಂತೆ ಬಿಬಿಎಂಪಿ ಸೇರಿದಂತೆ ರಾಜ್ಯದ ಎಲ್ಲಾ ನಗರಕ್ಕೆ ಸ್ಥಳೀಯ ಸಂಸ್ಥೆಗಳಿಗೆ ಜು. 10ರಂದು ಆದೇಶಿಸಲಾಗಿತ್ತು. ಅದರಂತೆ ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿಯೂ ಸಾರ್ವಜನಿಕ ಕುಂದುಕೊರತೆ ನಿವಾರಣೆ ಘಟಕ ಸ್ಥಾಪಿಸಿ, ಎಸ್‌ಒಪಿ ಉಲ್ಲಂಘನೆ ಬಗ್ಗೆ ಇ-ಮೇಲ್‌, ವಾಟ್ಸ್‌ ಆ್ಯಪ್‌ ಮತ್ತು ಸಹಾಯವಾಣಿ ಮೂಲಕ ಸಾರ್ವಜನಿಕರು ದೂರು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಸರ್ಕಾರ ತಿಳಿಸಿತು. ಈ ಹೇಳಿಕೆ ದಾಖಲಿಸಿಕೊಂಡ ನ್ಯಾಯಪೀಠ ವಿಚಾರಣೆ ಮುಂದೂಡಿತು.

Advertisement

Udayavani is now on Telegram. Click here to join our channel and stay updated with the latest news.

Next