Advertisement

ಕೇಂದ್ರ ಸ್ಥಾನದಲ್ಲಿರಲು ಅಧಿಕಾರಿಗಳಿಗೆ ಸೂಚನೆ

02:40 PM Apr 11, 2020 | Suhan S |

ಚಿಕ್ಕಬಳ್ಳಾಪುರ: ತಂಡದ ಒಬ್ಬ ಸದಸ್ಯನಾಗಿ ನಾನು ನಿಮ್ಮೊಂದಿಗೆ ಕೆಲಸ ಮಾಡಲಿದ್ದೇನೆ. ಆದರೆ ಜಿಲ್ಲೆಯ ಅಭಿವೃದ್ಧಿ ವಿಚಾರದಲ್ಲಿ ನನ್ನ ವೇಗಕ್ಕೆ ಕೆಲಸ ಮಾಡದ ಅಧಿಕಾರಿಗಳು ಈಗಲೇ ಜಿಲ್ಲೆ ಬಿಟ್ಟು ತೊಲಗಲಿ, ಅಂತಹ ಅಧಿಕಾರಿಗಳು ಜಿಲ್ಲೆಗೆ ಬೇಡ.

Advertisement

ಜನರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಕೋವಿಡ್ 19 ಸಂಕಷ್ಟ  ದಿಂದ ಜಿಲ್ಲೆ ಮುಕ್ತವಾಗುವವರೆಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಯಾವುದೇ ಕಾರಣಕ್ಕೂ ಕೇಂದ್ರ ಸ್ಥಾನ ಬಿಟ್ಟು ಎಲ್ಲೂ ಹೋಗಬಾರದು. ಇದು ನೂತನ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಚಿಕ್ಕಬಳ್ಳಾ ಪುರ ಕ್ಷೇತ್ರದ ಶಾಸಕರು ಆಗಿರುವ ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌, ಜಿಲ್ಲಾ ಮಟ್ಟದ ಅಧಿಕಾರಿಗಳ ಮೊದಲ ಸಭೆಯಲ್ಲಿ ಜಿಲ್ಲೆಯ ಅಧಿಕಾರಿಗಳಿಗೆ ಖಡಕ್‌ ಎಚ್ಚರಿಕೆ ಕೊಟ್ಟು ಅಭಿವೃದ್ಧಿ ಪರ ಇಲ್ಲದ ಅಧಿಕಾರಿಗಳು ಹೊರಟು ಬಿಡಿ ಎಂದರು.

ಅಶಿಸ್ತು ಸಹಿಸಲ್ಲ: ಜಿಲ್ಲಾ ಉಸ್ತುವಾರಿ ಸಚಿವರಾದ ಬಳಿಕ ಮೊದಲ ಬಾರಿಗೆ ಶುಕ್ರವಾರ ಜಿಪಂ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಕೋವಿಡ್‌-19 ನಿಯಂತ್ರಣ, ಜಿಲ್ಲೆಯ ಕುಡಿಯುವ ನೀರಿನ ಪರಿಸ್ಥಿತಿ ಬಗ್ಗೆ ಇಲಾಖೆಗಳ ಪ್ರಗತಿ ಪರಾಮರ್ಶೆ ನಡೆಸಿದ ಅವರು, ಜಿಲ್ಲೆಯ ಅಭಿವೃದ್ಧಿ ವೇಗ ಹೆಚ್ಚಾಗಬೇಕು. ಇದಕ್ಕೆ ಅಧಿಕಾರಿಗಳು ಹಗಲು, ರಾತ್ರಿ ಕೆಲಸ ಮಾಡಿ ಜಿಲ್ಲೆಯ ಜನರಿಗೆ ಉತ್ತರದಾಯಕವಾಗಿ ಇರ  ಬೇಕೆಂದು ಸೂಚಿಸಿದರಲ್ಲದೇ ಅಧಿಕಾರಿಗಳಲ್ಲಿ ಅಶಿಸ್ತು ಅಥವಾ ಅವರ ವಿರುದ್ಧ ದೂರುಗಳು ಕೇಳಿ ಬಂದರೆ ಸಹಿಸುವುದಿಲ್ಲ ಎಂದರು.

ಜಿಲ್ಲೆ ಕೋವಿಡ್‌-19 ಮುಕ್ತವಾಗಬೇಕು, ಕುಡಿಯುವ ನೀರಿಗೆ ತೊಂದರೆ ಆಗದಂತೆ ಎಚ್ಚರ ವಹಿಸಬೇಕು, ರೈತರಿಗೆ ಬಿತ್ತನೆ ಸಮಯಕ್ಕೆ ಬಿತ್ತನೆ ಬೀಜ, ರಸಗೊಬ್ಬರ ಸಿಗುವಂತಾಗ ಬೇಕು, ಲಾಕ್‌ಡೌನ್‌ ಪರಿಣಾಮಕಾರಿ ಅನುಷ್ಠಾನಗೊಳಿಸ ಬೇಕು. ಕೃಷಿ ಉತ್ಪನ್ನಗಳ ಸಾಗಾಟ, ಮಾರಾಟಕ್ಕೆ ತೊಂದರೆ ಆಗದಂತೆ ನಿಗಾ ವಹಿಸಬೇಕು, ಮಾರುಕಟೆಟ್ಟೆಗಳಲ್ಲಿ ಸಾಮಾಜಿಕ ಅಂತರ ಇರಬೇಕು, ಕೊಳವೆಬಾವಿ ಕೊರೆಯುವುದಕ್ಕಿಂತ ಖಾಸಗಿ ಕೊಳವೆ ಬಾವಿ ಅಥವಾ ಟ್ಯಾಂಕರ್‌ ಮೂಲಕ ನೀರು ಪೂರೈಸಬೇಕು, ನ್ಯಾಯಬೆಲೆ ಅಂಗಡಿಗಳಲ್ಲಿ ಸಮರ್ಪಕವಾಗಿ ಪಡಿತರ ವಿತರಣೆಗೆ ಕ್ರಮ ವಹಿಸಬೇಕು ಎಂದು ಸೂಚಿಸಿದರು.

ಜಿಪಂ ಅಧ್ಯಕ್ಷ ಚಿಕ್ಕನರಸಿಂಹಯ್ಯ, ಡೀಸಿ ಆರ್‌.ಲತಾ, ಜಿಪಂ ಸಿಇಒ ಫೌಝೀಯಾ ತರುನ್ನುಮ್‌, ಎಸ್ಪಿ ಮಿಥುನ್‌ ಕುಮಾರ್‌, ಎಡಿಸಿ ಆರತಿ, ಉಪ ವಿಭಾಗಾಧಿಕಾರಿ ರಘುನಂದನ್‌ ಇದ್ದರು.

Advertisement

ನ್ಯಾಯ ಬೆಲೆ ಅಂಗಡಿಗಳಲ್ಲಿ ಸಮರ್ಪಕವಾಗಿ ಪಡಿತರ ವಿತರಣೆ ಆಗಬೇಕು. ಪೌರ ಕಾರ್ಮಿಕ ರಿಗೆ ಮೂರು ಹೊತ್ತು ಊಟದ ವ್ಯವಸ್ಥೆ ಮಾಡಿ ಅವರಿಗೆ ವೈಯಕ್ತಿಕ ಸುರಕ್ಷತಾ ಕವಚ ನೀಡಬೇಕು. ವಲಸಿಗರಿಗೆ ಊಟ, ವಸತಿ ಸೌಕರ್ಯ ಮಾಡಬೇಕು.   ಡಾ.ಕೆ.ಸುಧಾಕರ್‌, ಜಿಲ್ಲಾ ಉಸ್ತುವಾರಿ ಸಚಿವ

Advertisement

Udayavani is now on Telegram. Click here to join our channel and stay updated with the latest news.

Next