Advertisement

Temple ಪ್ರಸಾದಕ್ಕೆ ಬಳಸುವ ಕಚ್ಚಾ ಸಾಮಗ್ರಿ ಗುಣಮಟ್ಟ ಪರೀಕ್ಷೆಗೆ ಸೂಚನೆ

12:25 AM Mar 14, 2024 | Team Udayavani |

ಬೆಂಗಳೂರು: ರಾಜ್ಯದ ಮುಜರಾಯಿ ದೇವಾಲಯಗಳಲ್ಲಿ ವಿತರಿಸಲಾಗುವ ಪ್ರಸಾದದ ಗುಣಮಟ್ಟ ಪರೀಕ್ಷಿಸುವಂತೆ ಧಾರ್ಮಿಕ ಹಾಗೂ ದತ್ತಿಗಳ ಇಲಾಖೆ ಆಯುಕ್ತರಿಗೆ ಆಹಾರ ಸುರಕ್ಷೆ ಮತ್ತು ಗುಣಮಟ್ಟ ಇಲಾಖೆ ಆಯುಕ್ತರು ಪತ್ರ ಬರೆದಿದ್ದಾರೆ.

Advertisement

ಮುಜರಾಯಿ ಇಲಾಖೆ ವ್ಯಾಪ್ತಿಯ ಹಲವಾರು ದೇವಾಲಯಗಳಲ್ಲಿ ವಿತರಿಸಲಾಗುವ ಪ್ರಸಾದ ಸೇವನೆಯಿಂದ ಸಾರ್ವಜನಿಕರ ಆರೋಗ್ಯವು ಹದಗೆಡುವ ಅನೇಕ ಪ್ರಕರಣಗಳು ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕರಿಂದ ವರದಿಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ದೇವಾಲಯಗಳಲ್ಲಿ ಪ್ರಸಾದಕ್ಕೆ ಬಳಸುವ ಕಚ್ಚಾ ಸಾಮಗ್ರಿಗಳ ಗುಣಮಟ್ಟವನ್ನು ಪರೀಕ್ಷಿಸುವುದು ಅಗತ್ಯವಾಗಿರುತ್ತದೆ.

ಇಲಾಖೆ ವ್ಯಾಪ್ತಿಗೆ ಒಳಪಡುವ ದೇವಾಲಯಗಳಲ್ಲಿ ಪ್ರಸಾದ ತಯಾರಿಕೆಗೆ ಬಳಸಲಾಗುವ ಕಚ್ಚಾ ಸಾಮಗ್ರಿಗಳನ್ನು ಆಹಾರ ಸುರಕ್ಷೆ ಮತ್ತು ಗುಣಮಟ್ಟ ಇಲಾಖೆ (ಎಫ್ಎಸ್‌ಎಸ್‌ಎಐ) ಅಂಗೀಕೃತ ಎನ್‌ಎಬಿಎಲ್‌ ಮಾನ್ಯತೆ ಪಡೆದ ಪ್ರಯೋಗಾಲಯಗಳಲ್ಲಿ ತಮ್ಮ ಇಲಾಖಾ ಅನುದಾನದಲ್ಲಿ ಕಾಲಕಾಲಕ್ಕೆ ಗುಣವಿಶ್ಲೇಷಣೆಗೆ ಒಳಪಡಿಸಿದ ಬಳಿಕ ಉಪಯೋಗಿಸುವಂತೆ ಸಂಬಂಧಿಸಿದವರಿಗೆ ಸೂಚನೆ ನೀಡುವಂತೆ ಪತ್ರದಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next