Advertisement

Prajwal Revanna ವಿರುದ್ಧ ಸದ್ಯ ಆರೋಪ ನಿಗದಿ ಮಾಡದಂತೆ ಸೂಚನೆ

11:18 PM Jan 09, 2025 | Team Udayavani |

ಬೆಂಗಳೂರು: ಅತ್ಯಾಚಾರ ಪ್ರಕರಣಗಳಲ್ಲಿ ಆರೋಪಿ ಯಾಗಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಸದ್ಯ ಆರೋಪ ನಿಗದಿ ಮಾಡದಂತೆ ಜನಪ್ರತಿನಿಧಿಗಳ ಸೆಷನ್ಸ್‌ ನ್ಯಾಯಾಲಯಕ್ಕೆ ಹೈಕೋರ್ಟ್‌ ಸೂಚನೆ ನೀಡಿದ್ದು, ಮುಂದಿನ ವಿಚಾರಣೆಯನ್ನು ಜನವರಿ 16ಕ್ಕೆ ಮುಂದೂಡಿದೆ.

Advertisement

ಗುರುವಾರ ಅರ್ಜಿದಾರರು ಮತ್ತು ಪ್ರಾಸಿಕ್ಯೂಷನ್‌ ವಕೀಲರ ವಾದ ಆಲಿಸಿದ ಪೀಠ, ಆರೋಪ ನಿಗದಿಗೂ ಮುನ್ನ ವಾದ ಆಲಿಸುವ ಪ್ರಕ್ರಿಯೆ ವಿಚಾರಣಾಧೀನ ನ್ಯಾಯಾಲಯ ನಡೆಸಬಹುದು. ಆದರೆ ಮುಂದಿನ ವಿಚಾರಣೆವರೆಗೆ ಆರೋಪ ನಿಗದಿ ಮಾಡಬಾರದು ಎಂದು ನಿರ್ದೇಶಿಸಿತು.

ತನ್ನ ಕಾರು ಚಾಲಕನ ಫೋನ್‌ನಿಂದ ಪಡೆದಿರುವ ಫೋಟೋ ಮತ್ತು ಎಲ್ಲ ವೀಡಿಯೋ ಒದಗಿಸಲು ಪ್ರಾಸಿಕ್ಯೂಷನ್‌ಗೆ ಸೂಚಿಸಬೇಕು ಎಂದು ಕೋರಿ ಪ್ರಜ್ವಲ್‌ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಈ ನಿರ್ದೇಶನ ನೀಡಿದೆ.

Advertisement

Udayavani is now on Telegram. Click here to join our channel and stay updated with the latest news.

Next