ಅಧಿಕೃತ ಶಾಲೆಗಳ ಮಾಹಿತಿಯನ್ನು ತಮ್ಮ ಕಚೇರಿಯ ಆವರಣದಲ್ಲಿ ಸಾರ್ವಜನಿಕರಿಗೆ ಗೋಚರವಾಗುವಂತೆ ಶಾಲೆಯ ಹೆಸರು, ಮಾಧ್ಯಮ, ಪಠ್ಯಕ್ರಮ ಮತ್ತು ವಿಳಾಸ ಸಹಿತ ಪ್ರಕಟಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
Advertisement
ಶಾಲಾ ನೋಂದಣಿ, ಅನುಮತಿ ಪಡೆಯದೆ ನಡೆಯುತ್ತಿರುವ ಶಾಲೆಗಳನ್ನು ನಿಯಮಾನುಸಾರ ಮುಚ್ಚಬೇಕು, ನೋಂದಣಿ ಇಲ್ಲದೆ ಅನಧಿಕೃತವಾಗಿ ಉನ್ನತೀಕರಿಸಿದ ತರಗತಿಗಳನ್ನು ನಡೆಸುತ್ತಿರುವ ಶಾಲೆಗಳಿಗೆ ನೋಂದಣಿ ಪಡೆಯಲು 45 ದಿನಗಳ ಕಾಲಾವಕಾಶ ನೀಡಬೇಕು, ರಾಜ್ಯ ಪಠ್ಯಕ್ರಮದಲ್ಲಿ ಬೋಧಿಸಲು ಅನುಮತಿ ಪಡೆದು ಕೇಂದ್ರ ಪಠ್ಯಕ್ರಮದಲ್ಲಿ ಅನಧಿಕೃತವಾಗಿ ಬೋಧನೆ ಮಾಡುತ್ತಿರುವ ಶಾಲೆಗಳಿಗೆ ಅನುಮತಿ ಪಡೆದ ಪಠ್ಯಕ್ರಮದಲ್ಲಿ ಮಾತ್ರ ಬೋಧಿಸುವಂತೆ ಸೂಚಿಸಬೇಕು, ಅನಧಿಕೃತವಾಗಿ ಬೇರೆ ಮಾಧ್ಯಮದಲ್ಲಿ ಬೋಧಿಸುತ್ತಿರುವ ಶಾಲೆಗಳಿಗೆ 45 ದಿನಗಳಲ್ಲಿ ಅನುಮತಿ ಪಡೆಯಲು ಸೂಚಿಸಬೇಕು, ಅನಧಿಕೃತವಾಗಿ ಹೆಚ್ಚುವರಿ ತರಗತಿಗಳನ್ನು ಹೊಂದಿರುವ ಶಾಲೆಗಳು 45 ದಿನದೊಳಗೆ ಅನುಮತಿ ಪಡೆಯಬೇಕು, ಇಲಾಖೆಯ ಪೂರ್ವಾನುಮತಿಯಿಲ್ಲದೆ ಸ್ಥಳಾಂತರ ಅಥವಾ ಹಸ್ತಾಂತರಗೊಂಡ ಶಾಲೆಗಳು ಸಂಬಂಧಪಟ್ಟ ಪ್ರಾಧಿಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಅನುಮತಿ ಪಡೆದುಕೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ.