Advertisement
ಪಟ್ಟಣದ ಕ್ಷೇತ್ರ ಸಂಪನ್ಮೂಲ ಕೇಂದ್ರ (ಬಿಆರ್ ಸಿ)ದಲ್ಲಿ ಮಂಗಳವಾರ ನಡೆದ ಸರ್ಕಾರಿ ಮತ್ತು ಅನುದಾನಿತ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಭೆಯಲ್ಲಿ ಮಾತನಾಡಿದ ಅವರು, ನಮ್ಮ ತಾಲೂಕಿನಲ್ಲಿರುವ ಎಲ್ಲ ಶಾಲೆಗಳಲ್ಲಿ ಸುಮಾರು 1,809 ಕೊಠಡಿಗಳಿವೆ. ಅವುಗಳಲ್ಲಿ 190 ಕೊಠಡಿಗಳು ಶಿಥಿಲಾವಸ್ಥೆಯಲ್ಲಿವೆ. ಇವುಗಳ ಬಗ್ಗೆ ಮುಖ್ಯ ಶಿಕ್ಷಕರು ಲಿಖೀತ ಮಾಹಿತಿ ನೀಡಿ ಅನುದಾನ ಪಡೆದು ಕೊಠಡಿಗಳು ಸುರಕ್ಷಿತವಾಗಿಟ್ಟುಕೊಳ್ಳುವಂತೆ ನೋಡಿಕೊಳ್ಳಬೇಕು. ಮಳೆಗಾಲ ಇರುವ ಕಾರಣ ಮುಖ್ಯ ಶಿಕ್ಷಕರು ಸ್ವತ್ಛತೆ ಮತ್ತು ಸುಸ್ಥಿರತೆ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು. ಅಲ್ಲದೇ ಇದುವರೆಗೆ ಕ್ರೀಢಾನಿಧಿ, ಶಿಕ್ಷಕರ ಕಲ್ಯಾಣ ನಿಧಿ, ವಿದ್ಯಾರ್ಥಿಗಳ ಕಲ್ಯಾಣ ನಿಧಿ ಸೇರಿದಂತೆ ಯಾವುದೇ ಸರ್ಕಾರಿ ಶುಲ್ಕ ಪಾವತಿಸದೇ ಇದ್ದಲ್ಲಿ ತಕ್ಷಣ ಶುಲ್ಕ ಪಾವತಿಸಬೇಕು ಎಂದು ತಾಕೀತು ಮಾಡಿದರು.
Related Articles
Advertisement
ಬಿಆರ್‌ಪಿ ಶಕುಂತಲಾ ಸಾಲಮನಿ ಮಾತನಾಡಿ, ನಿಷ್ಟಾ 2.0 ತರಬೇತಿ ಪಡೆದ ಶಿಕ್ಷಕರು ಕಡ್ಡಾಯವಾಗಿ ತಮ್ಮ ಎಲ್ಲ ಪ್ರಮಾಣ ಪತ್ರಗಳೊಂದಿಗೆ ತಮ್ಮ ಸಂಪೂರ್ಣ ಮಾಹಿತಿ ಸಲ್ಲಿಸಬೇಕು ಎಂದು ಹೇಳಿದರು.
ಇಸಿಒ ಸಹದೇವ ಜಿ. ಮಾತನಾಡಿ, ಎಸ್‌ಎಸ್ ಎಲ್‌ಸಿ ವಿದ್ಯಾರ್ಥಿಗಳ ಗೈರು ಹಾಜರಿಯ ಬಗ್ಗೆ ಮಾಹಿತಿ ನೀಡಬೇಕು. ಈ ಸಲ ಹಾಜರಾತಿ ಬಗ್ಗೆ ಹೆಚ್ಚಿನ ಗಮನ ಕೊಟ್ಟು ಪ್ರತಿಶತ 75 ಹಾಜರಾತಿ ಇರುವ ಮಕ್ಕಳ ಪರೀಕ್ಷಾ ಶುಲ್ಕ ಮಾತ್ರ ಮಂಡಳಿಗೆ ಸಲ್ಲಿಸಬೇಕು ಎಂದು ಮಾಹಿತಿ ನೀಡಿದರು.
ಮುಖ್ಯಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ರಾಜಕುಮಾರ ಜೊಳದಪಕೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಜೋಷಿ, ಮುಖ್ಯ ಶಿಕ್ಷಕ ಎಂ.ಡಿ. ಹನೀಫ್, ಶ್ರೀಕಾಂತ ಮೂಲಗೆ, ರಮೇಶ ಮರೂರಕರ ಇದ್ದರು. ಮುಖ್ಯ ಶಿಕ್ಷಕ ಜಯರಾಜ ದಾಬಶೆಟ್ಟಿ ಸ್ವಾಗತಿಸಿದರು. ಚಂದ್ರಕಾಂತ ಖಂಡಾಳೆ ನಿರೂಪಿಸಿದರು. ಅಶೋಕ ಬರ್ಮಾ ವಂದಿಸಿದರು.