Advertisement

ಸಾರ್ವಜನಿಕ ಸ್ಥಳಗಳಲ್ಲಿ ಜನಸಂದಣಿ ತಡೆಯಲು ಸೂಚನೆ

01:23 PM May 02, 2020 | Suhan S |

ಧಾರವಾಡ:  ಕೋವಿಡ್ 19 ನಿಯಂತ್ರಣಕ್ಕಾಗಿ ಎಲ್ಲಾ ಸಮಯದಲ್ಲೂ ಸಾರ್ವಜನಿಕರ ಅಂತರ ನಿರ್ವಹಣೆ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಜನಸಂದಣಿ ತಡೆಗಟ್ಟಬೇಕು ಎಂದು ಡಿಸಿ ದೀಪಾ ಚೋಳನ್‌ ಹೇಳಿದರು.

Advertisement

ಡಿಸಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹಣ್ಣು ಮತ್ತು ತರಕಾರಿ, ಕಿರಾಣಿ ಅಂಗಡಿಗಳು, ಹಾಲಿನ ಬೂತ್‌ಗಳು ಸೇರಿದಂತೆ ಆಹಾರ ಪದಾರ್ಥಗಳ ಸಗಟು ಮತ್ತು ಚಿಲ್ಲರೆ ಮಾರುಕಟ್ಟೆಗಳ ದೈನಂದಿನ ವಿಡಿಯೋಗ್ರಾಫಿ ಅಥವಾ ಡ್ರೋನ್‌ ಚಿತ್ರೀಕರಣ ಪ್ರಾರಂಭಿಸಲು ವಿವಿಧ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಕೋವಿಡ್ 19 ನಿಯಂತ್ರಣಕ್ಕೆ ಮುಂಜಾಗ್ರತಾ ಕ್ರಮಗಳೇ ಮುಖ್ಯ.

ಹೀಗಾಗಿ ಸಾರ್ವಜನಿಕರು ಅಗತ್ಯ ವಸ್ತುಗಳನ್ನು ಖರೀದಿಸುವಾಗ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಮಾಸ್ಕ್ ಧರಿಸುವುದು, ಸಾರ್ವಜನಿಕ ಸ್ಥಳಗಳಲ್ಲಿ ಉಗುಳದಂತೆ ನಿಗಾ ವಹಿಸಲು ಪ್ರತಿದಿನ ವಿಡಿಯೋ, ಸಿಸಿ ಟಿವಿ ಕ್ಯಾಮೆರಾ ಅಥವಾ ಡ್ರೋನ್‌ ಮೂಲಕ ಚಿತ್ರೀಕರಣ ಮಾಡಿ ನಿರಂತರವಾಗಿ ನಿಗಾ ವಹಿಸಬೇಕು. ಹು-ಧಾ ಮಹಾನಗರ ಪಾಲಿಕೆ ಆಯುಕ್ತರು, ಎಪಿಎಂಸಿ ಕಾರ್ಯದರ್ಶಿಗಳು, ಜಂಟಿ ಕೃಷಿ ನಿರ್ದೇಶಕರು, ತೋಟಗಾರಿಕೆ ಉಪ ನಿರ್ದೇಶಕರು ಈ ಕಾರ್ಯವನ್ನು ಆದ್ಯತೆ ಮೇಲೆ ಕೈಗೊಳ್ಳಲು ಸೂಚನೆ ನೀಡಿದರು.

ಪೊಲೀಸ್‌ ಆಯುಕ್ತ ಆರ್‌. ದಿಲೀಪ್‌, ಜಿಪಂ ಸಿಇಒ ಡಾ| ಬಿ.ಸಿ. ಸತೀಶ, ಪಾಲಿಕೆ ಆಯುಕ್ತ ಡಾ| ಸುರೇಶ ಇಟ್ನಾಳ, ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಎಸಿ ಮಹ್ಮದ್‌ ಜುಬೇರ್‌ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next