Advertisement

ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ-ಸೌಲಭ್ಯ ಒದಗಿಸಲು ಸೂಚನೆ

05:35 PM Nov 30, 2019 | Suhan S |

ಗದಗ: ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಮೇಲಿಂದ ಮೇಲೆ ತಾಲೂಕು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡುವ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ಹಾಗೂ ಸೌಲಭ್ಯಗಳು ದೊರೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಜಿ.ಪಂ. ಅಧ್ಯಕ್ಷ ಸಿದ್ದು ಪಾಟೀಲ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

Advertisement

ಜಿಲ್ಲಾಡಳಿತ ಭವನದ ಜಿ.ಪಂ. ಅಧ್ಯಕ್ಷರ ಸಭಾಂಗಣದಲ್ಲಿ ಶುಕ್ರವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಗತಿ ಪರಿಶೀಲಿಸಿ, ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡುವ ರೋಗಿಗಳಿಗೆ ಶುದ್ಧ ಕುಡಿಯುವ ನೀರಿನ ಸೌಲಭ್ಯ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಜಿಲ್ಲೆಯಲ್ಲಿ ಜಾರಿ ಇರುವ ಬಹುಗ್ರಾಮ ಕುಡಿಯುವನೀರಿನ ಯೋಜನೆಯಡಿ ಜಿಲ್ಲೆಯ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆನೀರಿನ ಸಂಪರ್ಕ ಕಲ್ಪಿಸಲು ಅಗತ್ಯದ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆ್ಯಂಬುಲೆನ್ಸ್‌ಗಳ ಮಾಹಿತಿ ಪಡೆದ ಅವರು, ಜಿಲ್ಲೆಯಲ್ಲಿ ಕೊರತೆಯಿರುವ ಆ್ಯಂಬುಲೆನ್ಸ್‌ಗಳ ಖರೀದಿಗಾಗಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿದರು.ಜಿಲ್ಲೆಯಲ್ಲಿ ಡೆಂಘೀ ಹಾಗೂ ಮಲೇರಿಯಾ ನಿಯಂತ್ರಣಕ್ಕೆ ಕ್ರಮ ಜರುಗಿಸುವಂತೆ ಸೂಚಿಸಿದರು.

ಜಿ.ಪಂ. ಉಪಕಾರ್ಯದರ್ಶಿ ಬಿ.ಕಲ್ಲೇಶ, ಜಿಲ್ಲಾ ಆರೋಗ್ಯ ಮತ್ತು ಕುಟುಂಬಕಲ್ಯಾಣಾಧಿಕಾರಿ ಸತೀಶ ಬಸರೀಗಡದ ಸೇರಿದಂತೆ ತಾಲೂಕು ವೈದ್ಯಾಧಿಕಾರಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next