Advertisement

ಸಿಬ್ಬಂದಿ,ಕಾರ್ಮಿಕರಿಗೆ ಲಸಿಕೆ ಕೊಡಿಸಲು ಸೂಚನೆ

04:38 PM Aug 17, 2021 | Team Udayavani |

ಮಂಡ್ಯ: ಜಿಲ್ಲೆಯಲ್ಲಿನ ಕೈಗಾರಿಕೋದ್ಯಮಿಗಳು ಮತ್ತು ಇತರೆ ಖಾಸಗಿ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಮತ್ತು ಕಾರ್ಮಿಕರಿಗೆ ಶೀಘ್ರದಲ್ಲಿಯೇ ಕೋವಿಡ್‌ ಮೊದಲನೇ ಮತ್ತು ಎರಡನೇ ಡೋಸ್‌ ಕೊಡಿಸುವುದರ ಜೊತೆಗೆ ಕೋವಿಡ್‌ ಮೂರನೇ ಅಲೆ ತಡೆಗಟ್ಟುವಲ್ಲಿ ಸರ್ಕಾರದ ಜತೆ ಕೈಜೋಡಿಸಿ ಎಂದು ಜಿಲ್ಲಾಧಿಕಾರಿ ಎಸ್‌.ಅಶ್ವಥಿ ಸೂಚಿಸಿದರು.

Advertisement

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದಜಿಲ್ಲೆಯಲ್ಲಿ ಸಕ್ರಿಯವಾಗಿರುವ ಕೈಗಾರಿಕೆಗಳು, ಸಂಘಟನೆಗಳು, ಸಂಘ-ಸಂಸ್ಥೆಗಳು,
ವಾಣಿಜ್ಯ ಸಂಸ್ಥೆಗಳು ಮತ್ತು ಇತರೆ ಇಲಾಖೆಗಳ ಸಹಯೋಗದೊಂದಿಗೆಸಿಎಸ್‌ಆರ್‌ ಚಟುವಟಿಕೆಯಲ್ಲಿ ಲಸಿಕಾಕರಣ ನಡೆಸುವ ಸಂಬಂಧ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಉದ್ಯಮಿಗಳು ತಮ್ಮ ಸಂಸ್ಥೆಯ ಕಾರ್ಮಿಕರಿಗೆ ಮತ್ತು ಅವರ ಕುಟುಂಬದ ಸದಸ್ಯರಿಗೆ ಶೇ.100ರಷ್ಟು ಲಸಿಕೆ ನೀಡಿ ಕೋವಿಡ್‌ ತಡೆಗಟ್ಟುವಲ್ಲಿ ಸಹಕರಿಸಬೇಕು ಎಂದರು.

ಲಸಿಕೆ ನೀಡಲು ಸಹಕರಿಸಿ: ಜಿಲ್ಲೆಯಲ್ಲಿ ಒಟ್ಟು18 ಲಕ್ಷ ಜನಸಂಖ್ಯೆ ಇದ್ದು, ಈಗಾಗಲೇ 9.70 ಲಕ್ಷ ಜನರಿಗೆ ಲಸಿಕೆ ನೀಡಲಾಗಿದೆ. ಕೋವಿಡ್‌ ಮೂರನೇ ಅಲೆ ತಡೆಗಟ್ಟುವ ನಿಟ್ಟಿನಲ್ಲಿ ಶೇ.70ರಷ್ಟು ಲಸಿಕಾಕರಣದ ಅಗತ್ಯವಿದೆ. ಆದ್ದರಿಂದ ಕೈಗಾರಿಕೋದ್ಯಮಗಳು ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ ಮತ್ತು ಕಾರ್ಮಿಕರಿಗೆ ಲಸಿಕೆ ನೀಡುವಲ್ಲಿ ಸಹಕರಿಸಬೇಕು ಎಂದರು.

ಇದನ್ನೂ ಓದಿ:ನನ್ನ ಮಕ್ಕಳಿಗೆ ಬೇಡವೇ ಬೇಡ ಬಣ್ಣದ ಲೋಕದ ಬದುಕು : ನಟಿ ಕರೀನಾ ಕಪೂರ್

ಕಾರ್ಮಿಕರ ಹಿತರಕ್ಷಣೆ ಮರೆಯದಿರಿ: ಜಿಲ್ಲೆಯಲ್ಲಿನ ಉದ್ಯಮಿಗಳು ಕೋವಿಡ್‌ ಸಂದರ್ಭದಲ್ಲಿ  ಮಾಸ್ಕ್ ಗಳು, ಆಹಾರ ಕಿಟ್‌ಗಳು ನೀಡಬೇಕು. ಕೋವಿಡ್‌ ಸಂದರ್ಭದಲ್ಲಿ ಜಿಲ್ಲೆಯಲ್ಲಿನ ಕೈಗಾರಿಕೆಗಳು ಉದ್ಯಮ ಸ್ಥಗಿತವಾಗಬಾರದು ಎಂಬ ಉದ್ದೇಶದಿಂದ ಕೈಗಾರಿಕೆಗಳ ಕಾರ್ಯಕ್ಕೆ ಅನುಮತಿ ನೀಡಲಾಗಿದೆ. ಆದ್ದರಿಂದ ನೀವು ನಿಮ್ಮ ಕಾರ್ಮಿಕರ ಹಿತರಕ್ಷಣೆಯನ್ನು ಅರಿತು ಕೂಡಲೇ ಲಸಿಕಾಕರಣಕ್ಕೆ ಆದ್ಯತೆ ನೀಡಿ ಎಂದರು.

Advertisement

ಜಿಲ್ಲೆಯಲ್ಲಿನ ಮಹಿಳಾ ಸ್ವಸಹಾಯ ಸಂಘಗಳು, ಸ್ತ್ರೀಶಕ್ತಿಒಕ್ಕೂಟಗಳುಹಾಗೂಅವರಕುಟುಂಬದವರಿಗೆ ಕೋವಿಡ್‌ ಲಸಿಕೆ ನೀಡಿ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ರಾಜಮೂರ್ತಿಗೆ ತಿಳಿಸಿದರು.

20ರೊಳಗೆ ಲಸಿಕೆ ನೀಡಿ: ಸರ್ಕಾರದಿಂದ ನಿರಂತರವಾಗಿ ಲಸಿಕೆ ನೀಡಲಾಗುತ್ತಿದೆ. ಜತೆಗೆ ಜಿಲ್ಲೆಯಲ್ಲಿನ ಹಣಕಾಸು ಸಂಸ್ಥೆಗಳು, ಸಂಘ-ಸಂಸ್ಥೆಗಳು, ಕೈಗಾರಿಕೆ ಸಂಸ್ಥೆಗಳು ಮತ್ತು ಇತರೆ ಖಾಸಗಿ ಕಂಪನಿಗಳು ಅ.20ರೊಳಗೆ ತಮ್ಮ ಸಿಬ್ಬಂದಿ ಮತ್ತು ಕಾರ್ಮಿಕರಿಗೆ ಲಸಿಕೆ ನೀಡಿ ಸರಿಯಾದ ಅಂಕಿಅಂಶಗಳನ್ನು ತಿಳಿಸಿ ಎಂದರು.

ಜಿಪಂ ಸಿಇಒ ದಿವ್ಯಪ್ರಭು, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಟಿ.ಎನ್‌.ಧನಂಜಯ, ಅಪರ ಪೊಲೀಸ್‌ ವರಿಷ್ಠಾಧಿಕಾರಿ ಧನಂಜಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ರಾಜಮೂರ್ತಿ,ರೆಡ್‌ಕ್ರಾಸ್‌ ಸಂಸ್ಥೆಯ ಮುಖ್ಯಸ್ಥೆ ಮೀರಾ ಶಿವಲಿಂಗಯ್ಯ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ತುಷಾರಮಣಿ ಸೇರಿದಂತೆ ಕೈಗಾರಿಕೋದ್ಯಮಿಗಳು, ಹಣಕಾಸು, ಸಂಘ-ಸಂಸ್ಥೆಗಳ ಮುಖ್ಯಸ್ಥರು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next