Advertisement

ಹಳ್ಳಿಗಳಲ್ಲಿ ಕುಡಿಯುವ ನೀರಿನ ಕೊರತೆ ಆಗದಂತೆ ಕ್ರಮಕ್ಕೆ ಸೂಚನೆ

12:05 AM Jun 27, 2023 | Team Udayavani |

ಬೆಂಗಳೂರು: ರಾಜ್ಯದ ಗ್ರಾಮೀಣ ಭಾಗಗಳ ಕೆಲವೆಡೆಗಳಲ್ಲಿ ಎದುರಾಗಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಅರಿತು, ತತ್‌ಕ್ಷಣದ ಪರಿಹಾರ ಕಂಡುಕೊಳ್ಳುವ ಸಲುವಾಗಿ ಜಿಪಂ ಸಿಇಒಗಳು ತಾಲೂಕು ಪ್ರವಾಸ ಕೈಗೊಳ್ಳಬೇಕೆಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ ನೀಡಿದ್ದಾರೆ.

Advertisement

ರಾಜ್ಯದಲ್ಲಿ ಮಳೆ ಕೊರತೆಯಿಂದ ಎದುರಾಗಿರುವ ನೀರಿನ ಸಮಸ್ಯೆ ಸಂಬಂಧ ರಾಜ್ಯದ ಎಲ್ಲ ಜಿ.ಪಂ. ಸಿಇಒಗಳ ಜತೆ ವೀಡಿಯೋ ಕಾನ್ಫರೆನ್ಸ್‌ ಸಭೆ ನಡೆಸಿದ ಸಚಿವರು, ಕುಡಿಯುವ ನೀರಿನ ಸಮಸ್ಯೆ ಆಗದಂತೆ ಎಚ್ಚರಿಕೆ ವಹಿಸಬೇಕೆಂದು ಹೇಳಿದರು.

ರಾಜ್ಯದ 16 ಜಿಲ್ಲೆಗಳಲ್ಲಿ ನೀರಿನ ಕೊರತೆಯುಂಟಾಗಿದ್ದು, ಇವುಗಳಲ್ಲಿ ದಕ್ಷಿಣ ಕನ್ನಡ, ಕೊಡಗು, ಶಿವಮೊಗ್ಗ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಅಂತರ್ಜಲ ಮಟ್ಟ ಕುಸಿದಿರುವುದರಿಂದ ನೀರಿನ ತೀವ್ರ ಕೊರತೆಯಿದೆ. 4 ಜಿಲ್ಲೆಗಳಲ್ಲಿ ಪರಿಸ್ಥಿತಿ ಸುಧಾರಣೆಯಿದೆ ಎಂಬ ಮಾಹಿತಿಯನ್ನು ಅಧಿಕಾರಿಗಳು ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next