Advertisement

Karnataka ಮದ್ರಸಾಗಳಲ್ಲಿ ಕನ್ನಡ, ಇಂಗ್ಲಿಷ್‌ ಶಿಕ್ಷಣಕ್ಕೆ ಸೂಚನೆ

11:30 PM Aug 28, 2023 | Team Udayavani |

ಬೆಂಗಳೂರು: ಮದ್ರಸಾಗಳಲ್ಲಿ ಕನ್ನಡ ಮತ್ತು ಇಂಗ್ಲಿಷ್‌ ಸಹಿತ ವಿಜ್ಞಾನ, ಗಣಿತ ವಿಷಯಗಳನ್ನು ಕಲಿಸಲು ವಸತಿ ಹಾಗೂ ಅಲ್ಪಸಂಖ್ಯಾಕರ ಕಲ್ಯಾಣ ಸಚಿವ ಜಮೀರ್‌ ಅಹಮದ್‌ ಖಾನ್‌ ಸೂಚನೆ ನೀಡಿದ್ದಾರೆ.

Advertisement

ಅಲ್ಪಸಂಖ್ಯಾಕರ ಕಲ್ಯಾಣ ನಿರ್ದೇಶನಾಲಯ ಸಭಾಂಗಣದಲ್ಲಿ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು, ಮದ್ರಸಾಗಳಲ್ಲಿ ಪ್ರಮುಖವಾಗಿ ಕನ್ನಡ ಕಡ್ಡಾಯವಾಗಿ ಕಲಿಸಲೇಬೇಕು. ಉಳಿದಂತೆ ಇಂಗ್ಲಿಷ್‌ ಸಹಿತ ಇತರ ಭಾಷೆ ಕಲಿಸಲು ಕ್ರಮ ಕೈಗೊಳ್ಳಲು ನಿರ್ದೇಶಿಸಿದರು.

ರಾಜ್ಯದಲ್ಲಿ 1,265 ವಕ್ಫ್ ಮಂಡಳಿಯಲ್ಲಿ ನೋಂದಣಿಯಾದ ಮದ್ರಸಾಗಳಿದ್ದು, ಆ ಪೈಕಿ 100 ಮದ್ರಸಾಗಳ ಐದು ಸಾವಿರ ಮಕ್ಕಳಿಗೆ ಈ ವರ್ಷದಿಂದಲೇ ಪ್ರಾಯೋಗಿಕವಾಗಿ ಕಲಿಕೆ ಆರಂಭಿಸಬೇಕು. ಮುಂದಿನ ವರ್ಷದಿಂದ ಎಲ್ಲ ಮದ್ರಸಾಗಳಲ್ಲಿ ಇದನ್ನು ಆರಂಭಿಸಲು ಪ್ರಸ್ತಾವನೆ ಸಿದ್ದಪಡಿಸಬೇಕೆಂದು ಅಧಿಕಾರಿಗಳಿಗೆ ತಿಳಿಸಿದರು.

ಅಲ್ಪಸಂಖ್ಯಾಕರ ಕಲ್ಯಾಣ ನಿರ್ದೇಶನಾಲಯ ವ್ಯಾಪ್ತಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಕಾಲೇಜು ಮತ್ತು ಮೌಲಾನಾ ಅಜಾದ್‌ ಮಾದರಿ ಶಾಲೆಗಳ 9,10 ಹಾಗೂ 12 ನೇ ತರಗತಿಯ ಒಂದು ಲಕ್ಷ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ ಸುಧಾರಿಸಲು ಸಿದ್ಧಪಡಿಸಿರುವ ವಿಜ್ಞಾನ ಮತ್ತು ಗಣಿತ ಸಹಿತ ವಿವಿಧ ವಿಷಯಗಳ ಕೈಪಿಡಿ ಹಾಗೂ ನಿರ್ದೇಶನಾಲಯದ ಯೋಜನೆಗಳ ಕೈಪಿಡಿಯನ್ನು ಸಚಿವರು ಇದೇ ವೇಳೆ ಬಿಡುಗಡೆ ಮಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next