ಶಿವಮೊಗ್ಗ: ಬೆಂಗಳೂರಿನಲ್ಲಿ ರೌಡಿಸಂ ಮಟ್ಟ ಹಾಕಲು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ರಿಯಲ್ ಎಸ್ಟೇಟ್, ಮಾದಕ ವಸ್ತುಗಳ ಬಗ್ಗೆ ಕಡಿವಾಣ ಹಾಕಲು ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಸೈಬರ್ ಕ್ರೈಮ್ ವಿಭಾಗವನ್ನು ಬಲಪಡಿಸಲಾಗಿದೆ. ಇನ್ಫೋಸಿಸ್ ಸಂಸ್ಥೆ ಕೂಡ ಸೈಬರ್ ಕ್ರೈಮ್ ನಿವಾರಣೆಗೆ ನೆರವು ನೀಡುತ್ತಿದೆ ಎಂದರು.
ಅಫ್ಘಾನಿಸ್ತಾನದ ರಾಜ್ಯದ ನಾಗರಿಕರ ಇರುವ ಬಗ್ಗೆ ಮಾಹಿತಿ ಪಡೆಯಲು ತಿಳಿಸಿದ್ದೇನೆ. ಈಗಾಗಲೇ ಪೊಲೀಸ್ ಅಧಿಕಾರಿ ಉಮೇಶ್ ಕುಮಾರ್ ನೇಮಕ ಸಹ ಮಾಡಲಾಗಿದೆ ಎಂದರು.
ಇದನ್ನೂ ಓದಿ:ಕೋವಿಡ್ ನಕಲಿ ವರದಿ ತಂದರೆ ಪ್ರಕರಣ ದಾಖಲಿಸಿ: ಸಚಿವ ಸೋಮಶೇಖರ್
ಶಿವಮೊಗ್ಗ ಜಿಲ್ಲೆಗೆ ಸಂಬಂಧಿಸಿದ ಮರಳು, ಜಲ್ಲಿ ಕ್ವಾರಿಗಳ ಸಮಸ್ಯೆ, 94 ಸಿ ಮೊದಲಾದ ಸಮಸ್ಯೆ ಬಗ್ಗೆ ಸಭೆ ನಡೆಸಿದ್ದೇವೆ. ಕಂದಾಯ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಕಲ್ಲು ಕ್ವಾರಿಗಳ ಸಮಸ್ಯೆ ಬಗೆಹರಿಸಲು ನಿರ್ಧಾರ ತೆಗೆದುಕೊಂಡಿದ್ದೇವೆ ಎಂದು ಹೇಳಿದರು.
ಭದ್ರಾವತಿ ಸೇರಿಸಿಕೊಂಡು ಶಿವಮೊಗ್ಗ ಕಮಿಷನರೇಟ್ ಸ್ಥಾಪನೆ ಮಾಡುವ ಚಿಂತನೆ ನಡೆಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.