Advertisement

ತ್ವರಿತಗತಿಯಲ್ಲಿ ಕಾಮಗಾರಿ ಮುಗಿಸಲು ಸೂಚನೆ

01:22 PM Dec 21, 2019 | Suhan S |

ರಾಯಚೂರು: ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಿ.ಕುಮಾರ ನಾಯಕ ಶುಕ್ರವಾರ ನೆರೆ ಪೀಡಿತ ಪ್ರದೇಶಗಳಾದ ದೇವದುರ್ಗ ತಾಲೂಕಿನ ಗಬ್ಬೂರು, ಹೂವಿನಹೆಡಗಿ ಹಾಗೂ ಲಿಂಗದಹಳ್ಳಿಗೆ ಭೇಟಿ ನೀಡಿ ವಿವಿಧ ಕಟ್ಟಡ ಕಾಮಗಾರಿ ಹಾಗೂ ನೆರೆ ಸಂತ್ರಸ್ತರಿಗೆ ಸರ್ಕಾರದಿಂದ ಕೈಗೊಂಡಿರುವ ಕಾಮಗಾರಿ ಪರಿಶೀಲಿಸಿದರು.

Advertisement

ಗಬ್ಬೂರಿನಲ್ಲಿ ನಿರ್ಮಾಣ ಹಂತದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ ಕಾಮಗಾರಿ ಪರಿಶೀಲಿಸಿದ ಅವರು ನಿಗದಿತ ಅವಧಿಯಲ್ಲಿ ನಿರ್ಮಾಣ ಕಾರ್ಯ ಮುಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ನಂತರ ದೇವದುರ್ಗ ತಾಲೂಕಿನನಿರ್ಮಾಣ ಹಂತದಲ್ಲಿರುವ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆ ಕಟ್ಟಡಕ್ಕೆ ಭೇಟಿ ನೀಡಿ ತ್ವರಿತಗತಿಯಲ್ಲಿ ಕೆಲಸ ಮುಗಿಸುವಂತೆ ಸೂಚಿಸಿದರು. ಇತ್ತೀಚೆಗೆ ಜಿಲ್ಲೆಯಲ್ಲಿ ಉಂಟಾದ ನೆರೆಹಾವಳಿಯಿಂದ ಮುಳುಗಡೆಯಾದ ಹೂವಿನಹೆಡಗಿ ಸೇತುವೆಗೆ ಭೇಟಿ ನೀಡಿ ನೆರೆ ಸಂತ್ರಸ್ತರಿಗೆ ಅಲ್ಲಿ ಮನೆ ನಿರ್ಮಾಣಕ್ಕೆ ಸರ್ಕಾರದಿಂದ ಒದಗಿಸಿದ ಸೌಲಭ್ಯಗಳ ಕುರಿತು ಪರಿಶೀಲಿಸಿದರು.

ನಂತರ ಲಿಂಗದಳ್ಳಿಯಲ್ಲಿ ಆಯೋಜಿಸಿದ್ದ ಕರ್ನಾಟಕ ಹಾಲು ಒಕ್ಕೂಟ ಸಂಘದ ಸಭೆಯಲ್ಲಿ ಸದಸ್ಯರೊಂದಿಗೆ ಮಾತುಕತೆ ನಡೆಸಿದರು. ನೆರೆ ಹಾವಳಿಯಿಂದ ಹಾನಿಗೊಳಗಾದ ಸಾರ್ವಜನಿಕ ಆಸ್ತಿಗಳನ್ನು ಪುನರ್‌ ನಿರ್ಮಿಸುವ ಕುರಿತು ಮಾಹಿತಿ ಪಡೆದು ಬಾಕಿ ಕಾಮಗಾರಿಗಳನ್ನು ಶೀಘ್ರದಲ್ಲಿ ಮುಗಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಆರ್‌.ವೆಂಕಟೇಶಕುಮಾರ, ಜಿಪಂ ಸಿಇಒ ಲಕ್ಷ್ಮೀಕಾಂತ ರೆಡ್ಡಿ, ಯತೀಶಕುಮಾರ, ದೇವದುರ್ಗ ತಹಶೀಲ್ದಾರ್‌ ಮಂಜುನಾಥ ಭೋಗಾವತಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಸುಬ್ರಮಣ್ಯ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next